ಪಾಕ್ ಕ್ರಿಕೆಟಿಗ ಅಬ್ದುಲ್ ಮನೆ ಮೇಲೆ ಪೊಲೀಸರ ದಾಳಿ
ಪಾಕಿಸ್ತಾನದ ಮಾಜಿ ಸ್ಪಿನ್ನರ್ ಅಬ್ದುಲ್...
ಲಾಹೋರ್: ಪಾಕಿಸ್ತಾನದ ಮಾಜಿ ಸ್ಪಿನ್ನರ್ ಅಬ್ದುಲ್ ಖಾದಿರ್ ನಿವಾಸದ ಮೇಲೆ ಭಾನುವಾರ ಅಲ್ಲಿನ ಪೊಲೀಸರು ದಾಳಿ ನಡೆಸಿದ್ದಾರೆ.
ಪಾಕಿಸ್ತಾನದಲ್ಲಿರುವ ಸರ್ಕಾರವನ್ನು ವಜಾಗೊಳಿಸಬೇಕು ಎಂಬ ಬಗ್ಗೆ ಪ್ರತಿಭಟನೆಗಳು ನಡೆಯುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಖಾದಿರ್ ಮನೆ ಮೇಲೆ ದಾಳಿ ನಡೆಸಲಾಗಿದೆ.
ಖಾದಿರ್ ಅವರ 24 ವರ್ಷದ ಪುತ್ರಿ ಫಾತಿಮಾ, ಪಾಕಿಸ್ತಾನ ತೆಹ್ರಿಕ್-ಇ-ಇನ್ಸಾಫ್ ಪಕ್ಷದ ಮಹಿಳಾ ಘಟಕದ ಸದಸ್ಯರಾದಾಗಿನಿಂದ ನಿವಾಸದ ಮೇಲೆ ದಾಳಿ ನಡೆಸಲಾಗುತ್ತಿದೆ.
ಅವರ ಪುತ್ರ ಸಹ ಪಕ್ಷದ ಸದಸ್ಯರಾಗಿದ್ದಾರೆ ಎಂದು ಮಾಜಿ ಕ್ರಿಕೆಟಿಗನ ಆಪ್ತ ಮೂಲಗಳು ತಿಳಿಸಿವೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಲು ಖಾದಿರ್ ನಿರಾಕರಿಸಿದ್ದಾರೆ.