ಏಷ್ಯನ್ ಗೇಮ್ಸ್: ಭಾರತಕ್ಕೆ 3ನೇ ಚಿನ್ನ
17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪುರುಷರ ಸ್ಕ್ವಾಷ್ ತಂಡ ಏಷ್ಯಾಡ್'ನಲ್ಲಿ ಚಿನ್ನ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಇಂಚಾನ್: 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪುರುಷರ ಸ್ಕ್ವಾಷ್ ತಂಡ ಏಷ್ಯಾಡ್'ನಲ್ಲಿ ಚಿನ್ನ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ದಕ್ಷಿಣ ಕೊರಿಯಾದ ಇಂಚಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದ 8ನೇ ದಿನವಾದ ಇಂದು ಭಾರತೀಯ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಿದ್ದಾರೆ. ಏಷ್ಯನ್ ಗೇಮ್ಸ್‌ನ ಸ್ಕ್ವಾಷ್ ಫೈನಲ್‌ನಲ್ಲಿ ಮಲೇಷ್ಯಾ ವಿರುದ್ಧ ಭಾರತ ಗೆಲುವು ಸಾಧಿಸಿದೆ. ಈ ಮೂಲಕ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ 3ನೇ ಸ್ವರ್ಣಪದಕ ಬಂದಿದೆ.
ಇಂದು ನಡೆದ ಪಂದ್ಯಗಳಲ್ಲಿ ಭಾರತದ ಪರ ಕ್ರೀಡಾಪಟುಗಳು 2 ಚಿನ್ನ, 2 ಬೆಳ್ಳಿ ಮತ್ತು 3 ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ಈ ಮೂಲಕ ಟೂರ್ನಿಯಲ್ಲಿ ಭಾರತಕ್ಕೆ ಒಟ್ಟು 3 ಚಿನ್ನ, 4 ಬೆಳ್ಳಿ ಮತ್ತು 17 ಕಂಚಿನ ಪದಕಗಳು ದೊರಕಿವೆ.