ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ
17ನೇ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ ಒಲಿದು ಬಂದಿದೆ...
ಇಂಚಾನ್: 17ನೇ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ ಒಲಿದು ಬಂದಿದೆ.
ದಕ್ಷಿಣ ಕೊರಿಯಾದ ಇಂಚಾನ್‌ನಲ್ಲಿ ನಡೆಯುತ್ತಿರುವ 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಎರಡನೇ ಚಿನ್ನ ಗೆದ್ದುಕೊಂಡಿದೆ.
ಶನಿವಾರ ನಡೆದ ಅರ್ಚರಿ ವಿಭಾಗದಲ್ಲಿ ಭಾರತದ ಪುರುಷರ ತಂಡ ಗೆಲುವು ಸಾಧಿಸಿದ್ದು, ಚಿನ್ನ ಪದಕ ಗೆದ್ದುಕೊಂಡಿದೆ.
ಅಭಿಶೇಕ್ ವರ್ಮಾ, ರಜತ್ ಚೌವ್ಹಾಣ್ ಮತ್ತು ಸಂದೀಪ್ ಕುಮಾರ್ ಅವರನ್ನೊಳಗೊಂಡ ತಂಡ 227-225 ಅಂತರದಲ್ಲಿ ಜಯ ಸಾಧಿಸುವ ಮೂಲಕ ಭಾರತಕ್ಕೆ ಎರಡನೇ ಚಿನ್ನ ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.