ಡಿಸ್ಕಸ್ ಥ್ರೋನಲ್ಲಿ ಭಾರತಕ್ಕೆ ಚಿನ್ನ
17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಐದನೇ ಚಿನ್ನ ಒಲಿದು ಬಂದಿದೆ...
ಇಂಚಾನ್: 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಐದನೇ ಚಿನ್ನ ಒಲಿದು ಬಂದಿದೆ.
ದಕ್ಷಿಣ ಕೊರಿಯಾದ ಇಂಚಾನ್ನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದ ಡಿಸ್ಕಸ್ ಥ್ರೋ ವಿಭಾಗದಲ್ಲಿ ಭಾರತ ಚಿನ್ನದ ಪದಕ ಗೆದ್ದುಕೊಂಡಿದೆ.
ಡಿಸ್ಕಸ್ ಥ್ರೋ ವಿಭಾಗದಲ್ಲಿ ಕ್ರೀಡಾಪಟು ಸೀಮಾ ಪೂನಿಯಾ ಅವರು 61.03 ಮೀಟರ್ ದೂರ ಎಸೆದು ಪ್ರಥಮ ಸ್ಥಾನ ಗಳಿಸಿದ್ದಾರೆ.