ರೋಹಿತ್ ಶರ್ಮಾ 
ಕ್ರೀಡೆ

ಕೆಟ್ಟ ಆರಂಭ ದುಬಾರಿಯಾಯ್ತು: ನಾಯಕ ರೋಹಿತ್ ಶರ್ಮಾ ಸೋಲಿನ ಪರಮರ್ಶೆ

ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಆಡಿರುವ ಮೂರೂ ಪಂದ್ಯಗಳನ್ನು ಮುಂಬೈ ಇಂಡಿಯನ್ಸ್ ತಂಡ ಸೋತು ತೀವ್ರ ಮುಖಭಂಗ ಅನುಭವಿಸಿದೆ.

ಅಹ್ಮದಾಬಾದ್: ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಆಡಿರುವ ಮೂರೂ ಪಂದ್ಯಗಳನ್ನು ಮುಂಬೈ ಇಂಡಿಯನ್ಸ್ ತಂಡ ಸೋತು ತೀವ್ರ ಮುಖಭಂಗ ಅನುಭವಿಸಿದೆ.

ತಂಡ ಬ್ಯಾಟಿಂಗ್‍ನಲ್ಲಿ ಆರಂಭದಲ್ಲೇ ಕುಸಿತ ಕಾಣುತ್ತಿರುವುದು ಮತ್ತು ಬೌಲಿಂಗ್‍ನಲ್ಲಿ ಶಿಸ್ತುಬದ್ಧ ದಾಳಿಯ ಕೊರತೆ ಸೋಲಿಗೆ ಕಾರಣವಾಗಿದೆ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಪ್ರತಿ ಪಂದ್ಯದಲ್ಲೂ ನಾವು ಉತ್ತಮ ಆರಂಭ ಪಡೆದಿಲ್ಲ. ಬ್ಯಾಟಿಂಗ್ ವಿಭಾಗದಲ್ಲಿ ಕಳಪೆ ಪ್ರದರ್ಶನ ಮುಂದುವರಿಸಿದ್ದೇವೆ. ದಾಂಡಿಗರು ಮತ್ತಷ್ಟು ಹೆಚ್ಚು ಜವಾಬ್ದಾರಿ ಹೊತ್ತುಕೊಳ್ಳಬೇಕಿದೆ.

ಅಲ್ಲದೆ ಬೌಲಿಂಗ್ ಪ್ರದರ್ಶನದಲ್ಲಿ ಶಿಸ್ತಿನ ದಾಳಿ ಅಗತ್ಯವಿದೆ ಎಂದು ತಿಳಿಸಿದರು. ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ತಂಡ ಮತ್ತೆ ಹೋರಾಟ ನಡೆಸಲು ನೆರವಾದ ಕೋರಿ ಆ್ಯಂಡರ್ಸನ್ ಹಾಗೂ ಕೀರನ್ ಪೊಲಾರ್ಡ್‍ಗೆ ಧನ್ಯವಾದಗಳು. ಈ ಇಬ್ಬರು ಆಟಗಾರರ ಶತಕದ(104) ಜತೆಯಾಟ ತಂಡ ಗೌರವಯುತ ಮೊತ್ತ ಪೇರಿಸಲು ನೆರವಾಯಿತು. ಸತತ ಮೂರು ಪಂದ್ಯಗಳಲ್ಲಿ ಸೋಲನುಭವಿಸಿರುವುದರಿಂದ ನಾವು ಸುಧಾರಣೆ ಕಾಣಬೇಕಿದೆ ಎಂದರು.

ಫಿಂಚ್ ಹೊರಕ್ಕೆ
ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಬ್ಯಾಟ್ಸ್ ಮನ್ ಎರಾನ್ ಫಿಂಚ್ ಸ್ನಾಯು ಸೆಳೆತದಿಂದ ಬಳುತ್ತಿದ್ದು, ಐಪಿಎಲ್ ಟೂರ್ನಿಯ ಮುಂದಿನ ಪಂದ್ಯಗಳಿಂದ ಹೊರಗುಳಿಯುವುದು ಬಹುತೇಕ ಖಚಿತ ವಾಗಿದೆ. ರಾಜಸ್ಥಾನ ವಿರುದ್ಧ ಪಂದ್ಯದಲ್ಲಿ ಫಿಂಚ್ ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ