ಟಿ20 ಮಾದರಿಯಲ್ಲಿ 2016ರ ಏಷ್ಯಾಕಪ್ 
ಕ್ರೀಡೆ

ಟಿ20 ಮಾದರಿಯಲ್ಲಿ 2016ರ ಏಷ್ಯಾಕಪ್

ಮುಂದಿನ ವರ್ಷ ನಡೆಯಲಿರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯು ಏಕದಿನ ಮಾದರಿಯಿಂದ ಟಿ-20 ಮಾದರಿಗೆ ಬದಲಾಗಲಿದೆ...

ಇಸ್ಲಾಮಾಬಾದ್: ಮುಂದಿನ ವರ್ಷ ನಡೆಯಲಿರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯು ಏಕದಿನ ಮಾದರಿಯಿಂದ ಟಿ-20 ಮಾದರಿಗೆ ಬದಲಾಗಲಿದೆ.

ಈ ಟೂರ್ನಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಟಿ-20 ಮಾದರಿಯಲ್ಲಿ ಆಯೋಜಿಸಲಾಗುತ್ತಿದ್ದು, ಈ ನಿರ್ಧಾರವನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಯ್ಯದ್ ಅಶ್ರಫುಲ್ ಹಕ್ ಖಚಿತಪಡಿಸಿದ್ದಾರೆ. ಟೂರ್ನಿಯಲ್ಲಿ ಪ್ರಮುಖ ತಂಡಗಳ ಜತೆಗೆ ಎರಡು ಸಹಾಯಕ ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ ಎಂದು ತಿಳಿಸಿದರು.

ಈವೆರೆಗೂ ಏಷ್ಯಾಕಪ್ ಟೂರ್ನಿಯನ್ನು 2 ಬಾರಿ ಟೆಸ್ಟ್ ಮಾದರಿಯಲ್ಲಿ ಹಾಗೂ 12 ಬಾರಿ ಏಕದಿನ ಮಾದರಿಯಲ್ಲಿ ಆಯೋಜಿಸಲಾಗಿದೆ. ಮುಂದಿನ ವರ್ಷ ಟಿ-20 ವಿಶ್ವಕಪ್ ಟೂರ್ನಿ ನಡೆಯಲಿದ್ದು, ಏಷ್ಯಾಕಪ್ ಟೂರ್ನಿಯೂ ಟಿ-20 ಮಾದರಿಯಲ್ಲಿ ಫೆಬ್ರವರಿ ಹಾಗೂ ಮಾರ್ಚ್‍ನಲ್ಲಿ ನಡೆಯಲಿದೆ. ಈ ಟೂರ್ನಿಯನ್ನು ಯಾವ ದೇಶ ಆತಿಥ್ಯ ವಹಿಸಲಿದೆ ಎಂಬುದು ಇನ್ನು ನಿರ್ಧಾರವಾಗಿಲ್ಲ ಎಂದು ಹಕ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!