ಐಪಿಎಲ್‍ನಿಂದ ಶಮಿ- ಫಿಂಚ್ ಔಟ್? 
ಕ್ರೀಡೆ

ಐಪಿಎಲ್‍ನಿಂದ ಶಮಿ- ಫಿಂಚ್ ಔಟ್?

ವಿಶ್ವಕಪ್ ಟೂರ್ನಿಯ ನಂತರ ಮಂಡಿ ನೋವಿನಿಂದ ಬಳಲುತ್ತಿರುವ ಭಾರತ ತಂಡದ ವೇಗದ ಬೌಲರ್ ಮೊಹಮದ್ ಶಮಿ ಐಪಿಎಲ್ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆಗಳಿವೆ...

ನವದೆಹಲಿ: ವಿಶ್ವಕಪ್ ಟೂರ್ನಿಯ ನಂತರ ಮಂಡಿ ನೋವಿನಿಂದ ಬಳಲುತ್ತಿರುವ ಭಾರತ ತಂಡದ ವೇಗದ ಬೌಲರ್ ಮೊಹಮದ್ ಶಮಿ ಐಪಿಎಲ್ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆಗಳಿವೆ.

ಇದೇ ವೇಳೆ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ ಎರಾನ್ ಫಿಂಚ್ ಸಹ ಸ್ನಾಯು ಸೆಳೆತದಿಂದ ಬಳಲುತಿದ್ದು ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಡೆಲ್ಲಿ ಡೇರ್‍ಡೆವಿಲ್ಸ್ ತಂಡದ ಪರ ಐಪಿಎಲ್‍ನಲ್ಲಿ ಆಡಬೇಕಿದ್ದ ಮೊಹಮದ್ ಶಮಿ, ಈ ಆವೃತ್ತಿಯಲ್ಲಿ ಗಾಯದ ಸಮಸ್ಯೆಯಿಂದ ಕಣಕ್ಕಿಳಿದಿರಲಿಲ್ಲ.

ಶಮಿ ಅವರ ಗಾಯದ ಸಮಸ್ಯೆ, ಅವರು ಗುಣಮುಖರಾಗಲು ಬೇಕಾದ ಸಮಯ, ಫ್ರಾಂಚೈಸಿ ಅಶಮಿ ಬದಲಿಗೆ ಬೇರೆ ಆಟಗಾರನನ್ನು ಆಯ್ಕೆ ಮಾಡಿಕೊಳ್ಳಲು ಮನವಿ ಮಾಡುವರೇ ಎಂಬುದರ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದೆ. ಇನ್ನು ಮಂಗಳವಾರ ನಡೆದ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಅವರು ಗಾಯದ ಸಮಸ್ಯೆಗೆ ಒಳಗಾಗಿದ್ದರು. ಖುದ್ದು ಫಿಂಚ್ ಅವರೇ ತಮ್ಮ ಸ್ಕಾನಿಂಗ್ ವರದಿಗಳನ್ನು ಸಾಮಾಜಿಕ ಜಾಲತಾಣ ಟ್ವಿಟರ್‍ನಲ್ಲಿ ಹಂಚಿಕೊಂಡಿದ್ದಾರೆ. ಪರೀಕ್ಷೆ ವರದಿಗಳ ಪ್ರಕಾರ, ತಾವು ಸಧ್ಯದ ಮಟ್ಟಿಗೆ ಚೇತರಿಸಿಕೊಳ್ಳುವುದು ಅಸಾಧ್ಯ ಎಂದಿದ್ದಾರೆ. ಇದು ಅವರು ಐಪಿಎಲ್‍ನ ಉಳಿದ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಆಡುವುದು ಅನುಮಾನವಾಗಿದೆ. ಆದರೆ, ಈ ಇಬ್ಬರ ಬಗ್ಗೆ ಬಿಸಿಸಿಐ ಅಥವಾ ಐಪಿಎಲ್‍ನಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT