ಮೊಹಮ್ಮದ್‌ ಶಮಿ 
ಕ್ರೀಡೆ

ಐಪಿಎಲ್‌ನಿಂದ ಶಮಿ ಹೊರಕ್ಕೆ

ಮಂಡಿ ನೋವಿನಿಂದ ಬಳಲುತ್ತಿರುವ ಡೆಲ್ಲಿ ಡೇರ್‌ಡೆವಿಲ್ಸ್‌ ತಂಡದ ಮೊಹಮ್ಮದ್‌ ಶಮಿ ಈ ಬಾರಿಯ ಐಪಿಎಲ್‌ನಿಂದ ಹೊರಬಿದ್ದಿರುವ...

ನವದೆಹಲಿ: ಮಂಡಿ ನೋವಿನಿಂದ ಬಳಲುತ್ತಿರುವ ಡೆಲ್ಲಿ ಡೇರ್‌ಡೆವಿಲ್ಸ್‌ ತಂಡದ ಮೊಹಮ್ಮದ್‌ ಶಮಿ ಈ ಬಾರಿಯ ಐಪಿಎಲ್‌ನಿಂದ ಹೊರಬಿದ್ದಿರುವ  ವಿಷಯವನ್ನು ಗುರುವಾರ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಖಚಿತ ಪಡಿಸಿದೆ.

‘ಮೊಹಮ್ಮದ್ ಶಮಿ ಮಂಡಿ ನೋವಿನಿಂದ ಬಳಲುತ್ತಿದ್ದು ಅವರು ಗುಣಮುಖರಾಗಲು ಸಾಕಷ್ಟು ಸಮಯ ಹಿಡಿಯಲಿದೆ. ಅವರ ಬದಲಿಗೆ  ಮತ್ತೊಬ್ಬ ಆಟಗಾರನನ್ನು ಸೇರಿಸಿಕೊಳ್ಳಲು ಡೆಲ್ಲಿ ಡೇರ್‌ಡೆವಿಲ್ಸ್‌ ತಂಡಕ್ಕೆ  ಅವಕಾಶ ನೀಡಲಾಗಿದೆ’ ಎಂದು ಐಪಿಎಲ್‌ ತಾಂತ್ರಿಕ ಸಮಿತಿ ಹೇಳಿದೆ.

ವಿಶ್ವಕಪ್ ಕ್ರಿಕೆಟ್‌ ಪಂದ್ಯದ ವೇಳೆ ಶಮಿ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿತ್ತು. ಅವರಿನ್ನೂ ಗುಣಮುಖರಾಗದ ಕಾರಣ 8ನೇ ಆವೃತ್ತಿಯ ಐಪಿಎಲ್‌ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಶಮಿ 18 ವಿಕೆಟ್‌ ಕಬಳಿಸಿ ಉತ್ತಮ ಪ್ರದರ್ಶನ ನೀಡಿದ್ದರು. ಶಮಿ  ಅವರು ಮುಂಬರುವ ಬಾಂಗ್ಲಾದೇಶ ಪ್ರವಾಸದ ವೇಳೆಗೆ ಪರಿಪೂರ್ಣವಾಗಿ ಗುಣಮುಖರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ನನ್ನ ಜೊತೆ ಮರ್ಯಾದೆಯಿಂದ ಮಾತಾಡು: ಸ್ವಿಟ್ಜರ್ಲೆಂಡ್ ವಿರುದ್ಧದ ಪಂದ್ಯದ ನಡುವೆ ರೆಫರಿ ವಿರುದ್ಧ ಮೆಸ್ಸಿ ವಾಗ್ವಾದ, Video

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್