ಎರಾನ್ ಫಿಂಚ್ 
ಕ್ರೀಡೆ

ಫಿಂಚ್‍ಗೆ ಶಸ್ತ್ರ ಚಿಕಿತ್ಸೆ: ಐಪಿಎಲ್‍ನಿಂದ ಹೊರಕ್ಕೆ

ಐಪಿಎಲ್ ಎಂಟನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದ ಎರಾನ್ ಫಿಂಚ್, ಅಹ್ಮದಾಬಾದ್ ನಲ್ಲಿ ನಡೆದ ರಾಜಸ್ಥಾನ ರಾಯಲ್ಸ್...

ಮೆಲ್ಬರ್ನ್: ಐಪಿಎಲ್ ಎಂಟನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದ ಎರಾನ್ ಫಿಂಚ್, ಅಹ್ಮದಾಬಾದ್ ನಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಸ್ನಾಯು ಸೆಳತಕ್ಕೆ ಸಿಲುಕಿದ್ದರು.

ಈಗ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಕನಿಷ್ಠ 12  ವಾರಗಳ  ಕಾಲ ವಿಶ್ರಾಂತಿಯ ಅಗತ್ಯವಿದೆ. ಹಾಗಾಗಿ ಅವರು ಈ ಐಪಿಎಲ್ ಆವೃತ್ತಿಯಿಂದ ಹೊರಗುಲಿಯಲಿದ್ದಾರೆ.

ರಾಜಸ್ಥಾನ ರಾಯಲ್ಸ್ ವಿರುದ್ಧ ಏ.14ರಂದು ನಡೆದಿದ್ದ ಪಂದ್ಯದ ವೇಳೆ ಎಡಗಾಲಿನ ಸ್ನಾಯುಸೆಳೆತಕ್ಕೆ ಒಳಗಾಗಿದ್ದ ಫಿಂಚ್ ಅವರು ನಡೆಯಲು ಸಹ ಸಾಧ್ಯವಾಗದೇ ಇದ್ದ ಕಾರಣ ಇಬ್ಬರು ಸಹ ಆಟಗಾರರ ನೆರವಿನೊಂದಿಗೆ ಮೈದಾನದಿಂದ ಹೊರ ನಡೆದಿದ್ದರು.

ಐಪಿಎಲ್‍ನಿಂದ ಆಸ್ಟ್ರೇಲಿಯಾಕ್ಕೆ ಮರಳಿರುವ ಫಿಂಚ್, ಸ್ಕ್ಯಾನಿಂಗ್‍ಗೆ ಒಳಗಾಗಿದ್ದರು. ಆ ಮೂಲಕ ಅವರು ತೀವ್ರವಾದ ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ. ಎಂಬುದು ಖಚಿತವಾಗಿದೆ. ಇವರನ್ನು ಪರೀಕ್ಷಿಸಿದ ವೈದ್ಯರು ಶಸ್ತ್ರ ಚಿಕಿತ್ಸೆಗೆ ಒಳಗಾಗುವಂತೆ ತಿಳಿಸಿದ್ದರು.

ಮಂಗಳವಾರ ಫಿಂಚ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, 12 ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ದೈಹಿಕ ತಜ್ಞ ಅಲೆಕ್ಸ್ ಕೌಂಟೊರಿಸ್ ಬುಧವಾರ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!