ನವದೆಹಲಿ: ಕೇಂದ್ರ ಸರ್ಕಾರ ಪ್ರತಿವರ್ಷ ನೀಡುವ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಬಿಸಿಸಿಐ ಶಿಫಾರಸು ಮಾಡಿದೆ.
ಭಾನುವಾರ ನಡೆದ ಬಿಸಿಸಿಐ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ನಂತರ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಹೆಸರಿನಲ್ಲಿ ಹೊರಡಿಸಲಾಗಿರುವ ಮಾಧ್ಯಮ ಪ್ರಕಟಣೆಯಲ್ಲಿ ಈ ವಿಚಾರ ತಿಳಿಸಲಾಗಿದೆ.
ಸದ್ಯಕ್ಕೆ ಐಪಿಎಲ್‍ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಆಡುತ್ತಿರುವ ರೋಹಿತ್, ಈವರೆಗೆ 10 ಟೆಸ್ಟ್ ಪಂದ್ಯಗಳನ್ನಾಡಿದ್ದು, 135 ಏಕದಿನ ಹಾಗೂ 42 ಟಿ20 ಪಂದ್ಯಗಳಲ್ಲಿ
ಆಡಿದ್ದಾರೆ.