ಮಹೇಲಾ ಜಯವರ್ಧನೆ 
ಕ್ರೀಡೆ

ಆಂಗ್ಲರಿಗೆ ಜಯವರ್ಧನೆ ಬ್ಯಾಟಿಂಗ್ ಸಲಹೆಗಾರ?

ಇಂಗ್ಲೆಂಡ್ ತಂಡಕ್ಕೆ ಬ್ಯಾಟಿಂಗ್ ಸಲಹೆಗಾರರಾಗಿ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ ಅವರನ್ನು ಆಯ್ಕೆ ಮಾಡಲು ಇಸಿಬಿ ಚಿಂತನೆ ನಡೆಸಿದೆ.

ಲಂಡನ್: ಪಾಕಿಸ್ತಾನ ವಿರುದ್ಧದ ಸರಣಿಗಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸ ಮಾಡಲಿರುವ ಇಂಗ್ಲೆಂಡ್ ತಂಡಕ್ಕೆ ಬ್ಯಾಟಿಂಗ್ ಸಲಹೆಗಾರರಾಗಿ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ ಅವರನ್ನು ಆಯ್ಕೆ ಮಾಡಲು ಇಸಿಬಿ ಚಿಂತನೆ ನಡೆಸಿದೆ.

ಶ್ರೀಲಂಕಾದ ಖ್ಯಾತ ಆಟಗಾರ ಜಯವರ್ಧನೆ ಜತೆಗೆ ಈ ವಿಚಾರವಾಗಿ ಮಾತುಕತೆ ಆರಂಭಿಸಿದೆ. ಸದ್ಯಕ್ಕೆ ಮಾರ್ಕ್ ರಾಮ್ ಪ್ರಕಾಶ್ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಸಲಹೆಗಾರನಾಗಿದ್ದು, ಜಯವರ್ಧನೆ ಅವರನ್ನು ಅಲ್ಪಾವಧಿಗಾಗಿ ಸಹಾಯಕ ಸಲಹೆಗಾರ ನಾಗಿ ಆಯ್ಕೆ ಮಾಡಲು ಚಿಂತನೆ ನಡೆಸಲಾಗಿದೆ.

ಆರಂಭಿಕ ಹಂತದಲ್ಲಿ ನಾವು ಮಹೇಲಾ ಜತೆಗೆ ಚರ್ಚೆ ನಡೆಸಿದ್ದೇವೆ. ಸ್ವಲ್ಪ ಅವಧಿಗಾಗಿ ಅವರನ್ನು ತಂಡಕ್ಕೆ ಆಯ್ಕೆ  ಮಾಡಿಕೊಳ್ಳುವ ಸಾಧ್ಯತೆಗಳಿವೆ. ಯುಎಇಯಲ್ಲಿನ ವಾತಾವರಣವನ್ನು ಜಯವರ್ಧನೆ ಹೆಚ್ಚಾಗಿ ತಿಳಿದಿರುವುದರಿಂದ ಇಂಗ್ಲೆಂಡ್ ಬ್ಯಾಟ್ಸ್‍ಮನ್‍ಗಳಿಗೆ ಮಾರ್ಗದರ್ಶನ ನೀಡಲು ಅವರು ಸೂಕ್ತ. ಈವರೆಗೆ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಸಂಸ್ಥೆ ವಕ್ತಾರರು ತಿಳಿಸಿದ್ದಾರೆ. 2012ರಲ್ಲಿ ಇಂಗ್ಲೆಂಡ್ ಯುಎಇ ಪ್ರವಾಸ ಕೈಗೊಂಡಿದ್ದಾಗ 0-3  ಅಂತ-ರದಲ್ಲಿ ಸೋಲನುಭವಿಸಿತ್ತು. ಇಂಗ್ಲೆಂಡ್ ತಂಡ 3 ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳ ಸರಣಿಗಾಗಿ ಅಕ್ಟೋಬರ್‍ನಲ್ಲಿ ಯುಎಇ ಪ್ರವಾಸ ಕೈಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್