ವಿರಾಟ್ ಕೊಹ್ಲಿ (ಸಂಗ್ರಹ ಚಿತ್ರ) 
ಕ್ರೀಡೆ

ಗಾಲೆಯಲ್ಲಿ ಗೆಲುವಿನ ಸವಿ ಯಾರಿಗೋ?

ರವಾಸಿ ಭಾರತ ಹಾಗೂ ಆತಿಥೇಯ ಶ್ರೀಲಂಕಾ ನಡುವಣದ ಮೂರು ಟೆಸ್ಟ್ ಪಂದ್ಯ ಸರಣಿಗೆ ಬುಧವಾರ ಚಾಲನೆ ಸಿಗಲಿದ್ದು, 22 ವರ್ಷಗಳ ನಂತರ...

ಗಾಲೆ: ಪ್ರವಾಸಿ ಭಾರತ ಹಾಗೂ ಆತಿಥೇಯ ಶ್ರೀಲಂಕಾ ನಡುವಣದ ಮೂರು ಟೆಸ್ಟ್ ಪಂದ್ಯ ಸರಣಿಗೆ ಬುಧವಾರ ಚಾಲನೆ ಸಿಗಲಿದ್ದು, 22 ವರ್ಷಗಳ ನಂತರ ದ್ವೀಪರಾಷ್ಟ್ರದಲ್ಲಿ ಜಯ ಸಾಧಿಸುವ ಗುರಿಯನ್ನು ವಿರಾಟ್ ಕೊಹ್ಲಿ ಪಡೆ ಹೊತ್ತಿದೆ.

ಇತ್ತ ತವರಿನಲ್ಲಿ ಭಾರತದ ಮೇಲಿನ ತನ್ನ ಪ್ರಭುತ್ವವನ್ನು ಮುಂದುವರೆಸಿಕೊಂಡು ಹೋಗುವ ಛಲ ತೊಟ್ಟಿರುವ ಶ್ರೀಲಂಕಾ, ಭಾರತ ನಡೆಸಲು ಉದ್ದೇಶಿಸಿರುವ ಐವರು ಬೌಲರ್‍ಗಳ ದಾಳಿಗೆ ದಿಟ್ಟ ಉತ್ತರ ನೀಡಲು ಸಂಕಲ್ಪ ತೊಟ್ಟಿದೆ. ಬಾಂಗ್ಲಾದೇಶ ಪ್ರವಾಸದ ನಂತರ ಮೊಟ್ಟಮೊದಲ ವಿದೇಶಿ ಪ್ರವಾಸವನ್ನು ಕೈಗೊಳ್ಳುತ್ತಿರುವ ಯುವ ಭಾರತ ತಂಡಕ್ಕೆ ಅದರಲ್ಲೂ ನಾಯಕ ವಿರಾಟ್ ಕೊಹ್ಲಿಗೆ ಈ ಸರಣಿ ಮಹತ್ವಪೂರ್ಣವೆನಸಿದೆ.  

ಅಗ್ರಕ್ರಮಾಂಕದ ಆರು ಮಂದಿ ಆಟಗಾರರು ದ್ವೀಪರಾಷ್ಟ್ರದಲ್ಲಿ ಮೊಟ್ಟಮೊದಲ ಬಾರಿಗೆ ಆಡುತ್ತಿರುವುದು ಒಂದೆಡೆಯಾದರೆ, ಇದೇ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಟೆಸ್ಟ್ ಸರಣಿಯಲ್ಲಿ ತಂಡವನ್ನು ಮುನ್ನಡೆಸುತ್ತಿರುವ ಕೊಹ್ಲಿ, ಎರಡು ದಶಕಗಳ ನಂತರ ಶ್ರೀಲಂಕಾ ನೆಲದಲ್ಲಿ ಚೊಚ್ಚಲ ಗೆಲುವಿಗಾಗಿ ಎದುರುನೋಡುತ್ತಿದ್ದಾರೆ. ಆದಾಗ್ಯೂ ಇತ್ತೀಚೆಗೆ ಅವರು ಬ್ಯಾಟಿಂಗ್‍ನಲ್ಲಿ ಸ್ಥಿರ ಪ್ರದರ್ಶನ ನೀಡದಿರುವುದು ಸ್ವತಃ ಅವರಲ್ಲೇ ಅಧೈರ್ಯವನ್ನು ಉಂಟುಮಾಡಿದೆ. ಆದಾಗ್ಯೂ ಕೋಚ್ ರವಿಶಾಸ್ತ್ರಿ ಅವರ ಮಾರ್ಗದರ್ಶನದಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುವ ವಿಶ್ವಾಸದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!