ಇಷ್ಟು ಬೇಗ ಪ್ರಶಸ್ತಿ ನಿರೀಕ್ಷಿಸಿರಲಿಲ್ಲ: ಮಂದೀಪ್ ಜಂಗ್ರಾ
ದೇಶದ ಪ್ರತಿಷ್ಠಿತ ಕ್ರೀಡಾ ಪುರಸ್ಕಾರವಾಗಿರುವ ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿರುವ ಭರವಸೆಯ ಬಾಕ್ಸರ್ ಮಂದೀಪ್ ಜಂಗ್ರಾ...
ನವದೆಹಲಿ: ದೇಶದ ಪ್ರತಿಷ್ಠಿತ ಕ್ರೀಡಾ ಪುರಸ್ಕಾರವಾಗಿರುವ ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿರುವ ಭರವಸೆಯ ಬಾಕ್ಸರ್ ಮಂದೀಪ್ ಜಂಗ್ರಾ, ಈ ಬಗ್ಗೆ ಅಚ್ಚರಿ ವ್ಯಕ್ತಪಡಿಸಿ ಇಷ್ಟು ಬೇಗ ಈ ಪುರಸ್ಕಾರ ದೊರೆಯುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದಿದ್ದಾರೆ.
ಮುಂದಿನ ತಿಂಗಳು ನಡೆಯಲಿರುವ ಏಷ್ಯಾ ಚಾಂಪಿಯನ್ಶಿಪ್ಗೆ ಸಿದ್ಧತೆ ನಡೆಸುತ್ತಿರುವ ಮಂದೀಪ್, ಈ ಪ್ರಶಸ್ತಿ ಸಿಕ್ಕಿರುವುದಕ್ಕೆ ತನಗಿಂತ ನನ್ನ ಮಾರ್ಗದರ್ಶಕರಿಗೆ ಹೆಚ್ಚು ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.
``ಅಖಿಲ್ ಹಾಗೂ ಅವರ ಪತ್ನಿ ಪೂನಮ್ ನನ್ನ ಯಶಸ್ಸಿಗೆ ಸಾಕಷ್ಟು ಶ್ರಮಿಸುತ್ತಿದ್ದಾರೆ. ನನ್ನಲ್ಲಿ ತುಂಬಾ ನಂಬಿಕೆ ಇಟ್ಟಿದ್ದಾರೆ. ಅದನ್ನು ಉಳಿಸಿಕೊಂಡಿರುವುದು ಸಂತಸವಾಗಿದೆ'' ಎಂದು ಮಂದೀಪ್ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.