ಸೆರೆನಾಗೆ ಅಚ್ಚರಿಯ ಸೋಲು
ವಿಶ್ವದ ನಂಬರ್ ಒನ್ ಆಟಗಾರ್ತಿ ಹಾಗೂ ದಾಖಲೆಯ 21 ಗ್ರಾಂಡ್ ಸ್ಲಾಂ ಪ್ರಶಸ್ತಿ ವಿಜೇತೆ ಅಮೆರಿಕದ ಸೆರೆನಾ ವಿಲಿಯಮ್ಸ್, ರೋಜರ್ಸ್ ಕಪ್ ಟೆನಿಸ್ ಟೂರ್ನಿಯ...
ಟೊರಾಂಟೊ: ವಿಶ್ವದ ನಂಬರ್ ಒನ್ ಆಟಗಾರ್ತಿ ಹಾಗೂ ದಾಖಲೆಯ 21 ಗ್ರಾಂಡ್ ಸ್ಲಾಂ ಪ್ರಶಸ್ತಿ ವಿಜೇತೆ ಅಮೆರಿಕದ ಸೆರೆನಾ ವಿಲಿಯಮ್ಸ್, ರೋಜರ್ಸ್ ಕಪ್ ಟೆನಿಸ್ ಟೂರ್ನಿಯ ಸೆಮಿಫೈನಲ್ ನಲ್ಲಿ ಸೋಲು ಕಂಡಿದ್ದಾರೆ!
ಭಾನುವಾರ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ಸ್ವಿಜರ್ಲೆಂಡ್ನದ ಹದಿಹರೆ ಯದ ಆಟಗಾರ್ತಿ ಬೆಲಿಂಡಾ ಬೆನ್ಸಿಕ್ ವಿರುದ್ಧ ಸೆಣಸಿದ ಸೆರೆನಾ, 3-6, 7-5, 4-6 ಸೆಟ್ ಗಳ ಅಂತರದಲ್ಲಿ ಪರಾಭವಗೊಂಡರು. ಈ ಬಾರಿಯ ಟೆನಿಸ್ ಋತುವಿನಲ್ಲಿ ಸೆರೆನಾ ಈವರೆಗೆ ಆಡಿರುವ 45 ಪಂದ್ಯಗಳಲ್ಲಿ ಇದು ಅವರು ಕಂಡಿರುವ 2ನೇ ಸೋಲು.
2001, 2011 ಹಾಗೂ 2013ರಲ್ಲಿ ದೇ ರೋಜರ್ಸ್ ಅಂಗಣದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಸೆರೆನಾ, ಈ ಬಾರಿ ಉಪಾಂತ್ಯಕ್ಕೆ ತಮ್ಮ ಹೋರಾಟ ಅಂತ್ಯಗೊಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.