ಸಾನಿಯಾ ಮಿರ್ಜಾ 
ಕ್ರೀಡೆ

ಸಾನಿಯಾ ಖೇಲ್ ರತ್ನ ಪ್ರಶಸ್ತಿಗೆ ತಡೆ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್

2015ನೇ ಸಾಲಿನ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಹೈಕೋರ್ಟ್ ಏಕಸದಸ್ಯ ಪೀಠ ಬುಧವಾರ ತಡೆ ನೀಡಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೋಟಿಸ್..

ಬೆಂಗಳೂರು: 2015ನೇ ಸಾಲಿನ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಹೈಕೋರ್ಟ್ ಏಕಸದಸ್ಯ ಪೀಠ ಬುಧವಾರ ತಡೆ ನೀಡಿದ್ದು, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ಪ್ರಸಕ್ತ ಸಾಲಿನ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ನಿಯಮಾವಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿ ಅಂತಾರಾಷ್ಟ್ರೀಯ ಪ್ಯಾರಾಲಿಂಪಿಕ್ ಕ್ರೀಟಾಪಟು ಬೆಂಗಳೂರಿನ ಎಚ್.ಎನ್.ಗಿರೀಶ್  ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ, ಪ್ರಶಸ್ತಿಗೆ ತಡೆ ನೀಡಿ, ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಹೈಕೋರ್ಟ್ ಅಂತಿಮ ತೀರ್ಪಿಗೆ ಪ್ರಶಸ್ತಿ ಒಳಪಟ್ಟಿರುತ್ತದೆ ಎಂದು ಆದೇಶ ನೀಡಿದೆ.

ನಾನು ಸಾನಿಯಾ ಅವರಿಗಿಂತ ಹೆಚ್ಚು ಸಾಧನೆ ಮಾಡಿದ್ದು, ಪ್ರಶಸ್ತಿ ಪಡೆಯಲು ಸಾನಿಯಾಗಿಂತ ಹೆಚ್ಚಿನ ಅರ್ಹತೆ ಇದೆ ಎಂದು ಗಿರೀಶ್ ಪರ ವಕೀಲ ಎಂ.ಎಸ್. ಶ್ಯಾಮಸುಂದರ್ ವಾದಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!