ಏಕಲವ್ಯ ಪ್ರಶಸ್ತಿ (ಸಂಗ್ರಹ ಚಿತ್ರ) 
ಕ್ರೀಡೆ

ಏಕಲವ್ಯ ಪ್ರಶಸ್ತಿ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಕ್ರೀಡಾ ಸಾಧಕರಿಗೆ ಪ್ರಸಕ್ತ ವರ್ಷ ನೀಡಲಾಗುವ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟಂಬರ್ 5ವರೆಗೆ ವಿಸ್ತರಿಸಲಾಗಿದೆ...

ಬೆಂಗಳೂರು: ಕ್ರೀಡಾ ಸಾಧಕರಿಗೆ ಪ್ರಸಕ್ತ ವರ್ಷ ನೀಡಲಾಗುವ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟಂಬರ್ 5ವರೆಗೆ ವಿಸ್ತರಿಸಲಾಗಿದೆ.

ಕರ್ನಾಟಕ ಉಚ್ಛ ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಯುವಜನ ಮತ್ತು ಕ್ರೀಡಾ ಇಲಾಖೆ ವತಿಯಿಂದ ಬುಧವಾರ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪರಿಷ್ಕೃತ ಮಾರ್ಗಸೂಚಿ ಮತ್ತು ಅರ್ಜಿ ನಮೂನೆ ವೈಬೇ ಸೈಟ್ ವಿಳಾಸ WWW.karnatakayouthportal.in ನಲ್ಲಿ ಲಭ್ಯವಿದ್ದು, ಪರಿಷ್ಕೃತ ಕೊನೆಯ ದಿನಾಂಕದೊಳಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಲಿಖಿತ ಅರ್ಜಿಗಳನ್ನು ಸಹ ಪರಿಷ್ಕೃತ ಕೊನೆಯ ದಿನಾಂಕದೊಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು-56001 ಇವರಿಗೆ ತಲುಪುವಂತೆ ಕಳುಹಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಸಂಬಧಪಟ್ಟ ಜಿಲ್ಲೆಗಳ ಉಪನಿರ್ದೇಶಕರುಯಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಥವಾ ಕೇಂದ್ರ ಕಚೇರಿಯನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ