ಹೃತಿಕ್ ರೋಷನ್ (ಸಂಗ್ರಹ ಚಿತ್ರ) 
ಕ್ರೀಡೆ

ಅಥ್ಲೀಟ್‍ಗಳ ನೆರವಿಗೆ ನಿಂತ ಹೃತಿಕ್

ಭಾರತೀಯ ಕ್ರೀಡಾ ವಲಯದಲ್ಲಿ ತನ್ನದೇ ಆಸಕ್ತಿ ವಹಿಸಿರುವ ಬಾಲಿವುಡ್ ಸೂಪರ್ ಸ್ಟಾರ್ ಹೃತಿಕ್ ರೋಷನ್, ರಾಜ್ಯದ ಇಬ್ಬರು ಅಂಗವಿಕಲ ಈಜುಗಾರರಿಗೆ ಆರ್ಥಿಕ ನೆರವು ನೀಡಲು ಮುಂದೆ ಬಂದಿದ್ದಾರೆ...

ಬೆಂಗಳೂರು: ಭಾರತೀಯ ಕ್ರೀಡಾ ವಲಯದಲ್ಲಿ ತನ್ನದೇ ಆಸಕ್ತಿ ವಹಿಸಿರುವ ಬಾಲಿವುಡ್ ಸೂಪರ್ ಸ್ಟಾರ್ ಹೃತಿಕ್ ರೋಷನ್, ರಾಜ್ಯದ ಇಬ್ಬರು ಅಂಗವಿಕಲ ಈಜುಗಾರರಿಗೆ ಆರ್ಥಿಕ ನೆರವು ನೀಡಲು ಮುಂದೆ ಬಂದಿದ್ದಾರೆ.

ಮುಂದಿನ ವರ್ಷ ಬ್ರೆಜಿಲ್‍ನ ರಿಯೊ ಡಿ ಜನೈರೊದಲ್ಲಿ ನಡೆಯಲಿರುವ ಒಲಿಂಪಿಕ್ಸ್ ನಂತರ ನಡೆಯುವ ಪ್ಯಾರಾಲಿಂಪಿಕ್ಸ್‍ನಲ್ಲಿ ಭಾಗವಹಿಸಲಿರುವ ರಾಜ್ಯದ ಪ್ಯಾರಾಸ್ವಿಮ್ಮರ್
ಗಳಾದ ಶರತ್ ಗಾಯಕ್ವಾಡ್ ಹಾಗೂ ನಿರಂಜನ್ ಮುಕುಂದನ್‍ಗೆ ಮಹಾನ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ತಗಲುವ ಖರ್ಚುವೆಚ್ಚಗಳನ್ನು ಭರಿಸುವುದಾಗಿ ಹೃತಿಕ್ ರೋಷನ್ ಆಶ್ವಾಸನೆ ನೀಡಿದ್ದಾರೆ. ಹುಟ್ಟಿನಿಂದಲೇ ಎಡಗೈ ಅಂಗವೈಕಲ್ಯ ಹೊಂದಿರುವ ನಿರಂಜನ್, ಲಂಡನ್ ಪ್ಯಾರಾಲಿಂಪಿಕ್ಸ್ ಸೇರಿದಂತೆ ಹಲವಾರು ಪ್ರಮುಖ ಅಂತಾರಾಷ್ಟ್ರೀಯ
ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದು, ಏಷ್ಯನ್ ಕ್ರೀಡಾಕೂಟದಲ್ಲಿ ಪದಕಗಳನ್ನು ಗೆದ್ದಿದ್ದಾರೆ. ತಮ್ಮ ವೈಕಲ್ಯದ ನಡುವೆಯೂ 100 ಮೀ. ಬಟರ್ ಫ್ಲೈ ಸ್ಟ್ರೋಕ್ ವಿಭಾಗದಲ್ಲಿ ಪರಿಣತಿ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT