ಭಾರತ ಮಹಿಳಾ ಹಾಕಿ ತಂಡ (ಸಂಗ್ರಹ ಚಿತ್ರ) 
ಕ್ರೀಡೆ

ರಿಯೋ ಒಲಂಪಿಕ್ಸ್ ಗೆ ಅರ್ಹತೆ ಪಡೆದ ಭಾರತದ ಮಹಿಳಾ ಹಾಕಿ ತಂಡ

2016ರ ರಿಯೋ ಒಲಂಪಿಕ್ಸ್ ನಲ್ಲಿ ಭಾವಹಿಸಲು ಭಾರತದ ಮಹಿಳಾ ಹಾಕಿ ತಂಡ ಶುಕ್ರವಾರ ಅರ್ಹತೆಯನ್ನು ಪಡೆದುಕೊಂಡಿದೆ...

ನವದೆಹಲಿ: 2016ರ ರಿಯೋ ಒಲಂಪಿಕ್ಸ್ ನಲ್ಲಿ ಭಾವಹಿಸಲು ಭಾರತದ ಮಹಿಳಾ ಹಾಕಿ ತಂಡ ಶುಕ್ರವಾರ ಅರ್ಹತೆಯನ್ನು ಪಡೆದುಕೊಂಡಿದೆ.

ಶುಕ್ರವಾರ ನಡೆದ ಯುರೋ ಹಾಕಿ ಚಾಂಪಿಯನ್ ಶಿಪ್ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಸ್ಪೇನ್ ಸೋಲನ್ನನುಭವಿಸಿತು. ಈ ಹಿನ್ನೆಲೆಯಲ್ಲಿ ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಭಾಗ್ಯ ಭಾರತಕ್ಕೆ ಸಿಕ್ಕಿತು. 1980ರ ಒಲಂಪಿಕ್ಸ್ ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡ ಅರ್ಹತೆ ಪಡೆದಿತ್ತು. ಈ ಒಲಂಪಿಕ್ಸ್ ನಲ್ಲಿ ಭಾರತವು 4ನೇ ಸ್ಥಾನ ಪಡೆದುಕೊಂಡಿತ್ತು. 36 ವರ್ಷದ ಹಿಂದೆ ಕೈತಪ್ಪಿದ್ದ ಮೊದಲ ಸ್ಥಾನವನ್ನು ಇದೀಗ ಮತ್ತೆ ಪಡೆಯಲು ಭಾರತಕ್ಕೆ ಅವಕಾಶ ಸಿಕ್ಕಿದ್ದು, ರಿಯೋ ಒಲಂಪಿಕ್ಸ್ ಗೆ ಅರ್ಹತೆ ಪಡೆದಿರುವುದೊಂದು ಐತಿಹಾಸಿಕ ಸಾಧನೆ ಎಂದೇ ಹೇಳಬಹುದು.

ರಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ಒಟ್ಟು 12 ತಂಡಗಳಿಗೆ ಅವಕಾಶವಿದ್ದು, ಈಗಾಗಲೇ ಕೊರಿಯಾ, ಅರ್ಜೆಂಟೈನಾ, ಗ್ರೇಟ್ ಬ್ರಿಟನ್, ಚೀನಾ, ಜರ್ಮನಿ, ನೆದರ್ ಲ್ಯಾಂಡ್ಸ್, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಹಾಗೂ ಯುಎಸ್ಎ ಸೇರಿದಂತೆ ಒಟ್ಟು 9 ತಂಡಗಳು ತಮ್ಮ ಸ್ಥಾನಗಳನ್ನು ಗಟ್ಟಿಗೊಳಿಸಿಕೊಂಡಿದ್ದು, ಇದೀಗ ಈ ಪಟ್ಟಿಗೆ ಭಾರತವೂ ಸೇರಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT