ಚೇತೇಶ್ವರ ಪೂಜಾರ 
ಕ್ರೀಡೆ

3ನೇ ಟೆಸ್ಟ್: ಟೀಂ ಇಂಡಿಯಾಗೆ ಆರಂಭಿಕ ಆಘಾತ 21ಕ್ಕೆ 3 ವಿಕೆಟ್

111 ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾಗೆ ಆರಂಭಿಕ ಆಘಾತವಾಗಿದೆ. 21 ರನ್ ಗಳಿಗೆ ಪ್ರಮುಖ 3 ವಿಕೆಟ್ ಗಳನ್ನು ಕಳೆದುಕೊಂಡಿದೆ...

ಕೊಲಂಬೋ: 111 ರನ್ ಗಳ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾಗೆ ಆರಂಭಿಕ ಆಘಾತವಾಗಿದೆ. 21 ರನ್ ಗಳಿಗೆ ಪ್ರಮುಖ 3 ವಿಕೆಟ್ ಗಳನ್ನು ಕಳೆದುಕೊಂಡಿದೆ.
ಮೊದಲ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸಿದ್ದ ಚೇತೇಶ್ವರ ಪೂಜಾರ ಎರಡನೇ ಇನ್ನಿಂಗ್ಸ್ ನಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ. ಕನ್ನಡಿಗ ಕೆಎಲ್ ರಾಹುಲ್ 2, ಅಜಿಂಕ್ಯಾ ರಹಾನೆ 4 ರನ್ ಗಳಿಗೆ ಔಟಾಗಿದ್ದಾರೆ. ಸದ್ಯ ವಿರಾಟ್ ಕೊಹ್ಲಿ ಅಜೇಯ 1 ರನ್ ಹಾಗೂ ರೋಹಿತ್ ಶರ್ಮಾ 14 ರನ್ ಪೇರಿಸಿದ್ದಾರೆ. 
ಶ್ರೀಲಂಕಾ ಪರ ಪ್ರದೀಪ್ 2, ಪ್ರಸಾದ್ 1 ವಿಕೆಟ್ ಪಡೆದಿದ್ದಾರೆ. 
ಭಾರತಕ್ಕೆ 111ರನ್ ಗಳ ಇನ್ನಿಂಗ್ಸ್ ಮುನ್ನಡೆ
ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಅತಿಥೇಯ ಶ್ರೀಲಂಕಾ ಮೊದಲ ಇನ್ನಿಂಗ್ಸ್ 201 ರನ್ ಗಳಿಗೆ ಆಲೌಟ್ ಆಗಿದ್ದು, ಭಾರತಕ್ಕೆ 111 ರನ್ ಗಳ ಇನ್ನಿಂಗ್ಸ್​ಮುನ್ನಡೆ ದೊರೆತಿದೆ.
ಭಾರತ ತಂಡ ಚೇತೇಶ್ವರ ಪೂಜಾರ(ಅಜೇಯ 145 ರನ್) ದಾಖಲಿಸಿದ ಶತಕದ ನೆರವಿನಿಂದ ಮೊದಲ ಇನ್ನಿಂಗ್ಸ್​ ನಲ್ಲಿ 312 ರನ್ ಕಲೆ ಹಾಕಿತ್ತು. 
ಮೊದಲ ಇನ್ನಿಂಗ್ಸ್ ನಲ್ಲೇ ಶ್ರೀಲಂಕಾ ಕೇವಲ 201 ರನ್ ಗಳಿಗೆ ಆಲೌಟ್ ಆಗಿ ಹಿನ್ನಡೆ ಅನುಭವಿಸಿದೆ. ಲಂಕಾ ಪರ ಕುಶಲ್ ಪೆರೇರ 55 ರನ್ ಮತ್ತು ರಂಗನಾ ಹೇರಾತ್ 49 ರನ್ ದಾಖಲಿಸಿದ್ದು, ಬಿಟ್ಟರೆ ಉಳಿದ ಯಾವ ಆಟಗಾರನು ಹೆಚ್ಚು ಹೊತ್ತು ಕ್ರಿಸ್ ನಲ್ಲಿ ನಿಲ್ಲಲಿಲ್ಲ. 
ಭಾರತದ ಪರ ಇಶಾಂತ್ ಶರ್ಮ 5, ಸ್ಟುವರ್ಡ್ ಬಿನ್ನಿ ಮತ್ತು ಅಮೀತ್ ಮಿಶ್ರ ತಲಾ 2, ಉಮೇಶ್ ಯಾದವ್ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video