ಕಾರ್ಡಿಫ್: ನಾಯಕ ಇಯಾನ್ ಮೊರ್ಗನ್ (74) ಹಾಗೂ ಮೊಯೀನ್ ಅಲಿ (72) ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಇಂಗ್ಲೆಂಡ್ ತಂಡ ಟಿ20 ಪಂದ್ಯದಲ್ಲಿ ಗೆಲುವು ದಾಖಲಿಸಿದೆ.
ಸೋಮವಾರ ನಡೆದ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡ 5 ರನ್‍ಗಳ ಅಂತರದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿತು. ಈ ಮೂಲಕ ಆಶಸ್ ಟೆಸ್ಟ್ ಸರಣಿಯನ್ನು ಗೆದ್ದಿದ್ದ ಇಂಗ್ಲೆಂಡ್ ತಂಡ ಈಗ ಏಕೈಕ ಟಿ20 ಪಂದ್ಯವನ್ನು ಗೆದ್ದುಕೊಂಡಿದೆ. ಆ ಮೂಲಕ ಪ್ರಸಕ್ತ ಇಂಗ್ಲೆಂಡ್ ಪ್ರವಾಸದಲ್ಲಿ ಆಸ್ಟ್ರೇಲಿಯಾ ನಿರಾಸೆ ಹಾದಿ ಮುಂದುವರಿದಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 20 ಓವರ್‍ಗಳಲ್ಲಿ 5 ವಿಕೆಟ್‍ಗೆ 182 ರನ್ ದಾಖಲಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 8 ವಿಕೆಟ್‍ಗೆ 177 ರನ್ ದಾಖಲಿಸಲಷ್ಟೇ ಶಕ್ತರಾದರು. ಆಸ್ಟ್ರೇಲಿಯಾ ಪರ ಸ್ಟೀವನ್ ಸ್ಮಿತ್ (90) ಹೋರಾಟ ವ್ಯರ್ಥವಾಯಿತು.