ಆಸ್ಕರ್ ಪಿಸ್ಟೋರಿಯಸ್ (ಸಂಗ್ರಹ ಚಿತ್ರ) 
ಕ್ರೀಡೆ

ಆಸ್ಕರ್ ದೋಷಿ: ಕೋರ್ಟ್ ತೀರ್ಪು

ಗೆಳತಿ ರೀವಾ ಸ್ಟೀನ್‍ಕಾಂಪ್ ಅವರನ್ನು 2013ರಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣದಲ್ಲಿ ಬ್ಲೇಡ್ ರನ್ನರ್ ಖ್ಯಾತಿಯ ಆಸ್ಕರ್ ಪಿಸ್ಟೋರಿಯಸ್ ಅವರನ್ನು ಕೊಲೆಗಾರ ಎಂದು ದಕ್ಷಿಣ ಆಫ್ರಿಕಾ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ...

ಪ್ರಿಟೋರಿಯಾ: ಗೆಳತಿ ರೀವಾ ಸ್ಟೀನ್‍ಕಾಂಪ್ ಅವರನ್ನು 2013ರಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣದಲ್ಲಿ ಬ್ಲೇಡ್ ರನ್ನರ್ ಖ್ಯಾತಿಯ ಆಸ್ಕರ್ ಪಿಸ್ಟೋರಿಯಸ್ ಅವರನ್ನು ಕೊಲೆಗಾರ ಎಂದು  ದಕ್ಷಿಣ ಆಫ್ರಿಕಾ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕಳೆದ ಅಕ್ಟೋಬರ್‍ನಲ್ಲಿ ಪೆರೋಲ್ ಆಧಾರದ ಮೇಲೆ ಜೈಲಿನಿಂದ ಬಿಡುಗಡೆಯಾಗಿ ಗೃಹ ಬಂಧನದಲ್ಲಿದ್ದ ಪಿಸ್ಟೋರಿಯಸ್ ಈಗ ಮತ್ತೆ ಜೈಲಿಗೆ ಹೋಗಬೇಕಿದೆ. ಆರೋಪಿ ಅಪರಾಧ ಉದ್ದೇಶ  ಹೊಂದಿದ್ದರಿಂದ ಇದನ್ನು ಕೊಲೆ ಎಂದು ನಿರ್ಧರಿಸಲಾಗಿದೆ ಎಂದು ನ್ಯಾಯಮೂರ್ತಿ ಎರಿಕ್ ಲೀಚ್ ತಿಳಿಸಿದ್ದಾರೆ. ಈ ಪ್ರಕರಣವನ್ನು ಮತ್ತೆ ಟ್ರಯಲ್ ಕೋಟ್ರ್ ಗೆ ಕಳುಹಿಸಲಾಗಿದ್ದು,  ಪಿಸ್ಟೋರಿಯಸ್‍ಗೆ ತಕ್ಕ ಶಿಕ್ಷೆ ಪ್ರಮಾಣ ಪ್ರಕಟಿಸಲು ತಿಳಿಸಲಾಗಿದೆ.

ದಕ್ಷಿಣ ಆಫ್ರಿಕಾದಲ್ಲಿ ಕೊಲೆ ಆರೋಪ ಸಾಬೀತಾದರೆ 15 ವರ್ಷ ಜೈಲು ಶಿಕ್ಷೆ ಇದೆ. ನ್ಯಾಯಮೂರ್ತಿಗಳು ಮಾತ್ರ ಈ ಶಿಕ್ಷೆ ಪ್ರಮಾಣ ಕಡಿಮೆ ಮಾಡುವ ಅಧಿಕಾರ ಹೊಂದಿರುತ್ತಾರೆ. ಹಾಗಾಗಿ  ಪಿಸ್ಟೋರಿಯಸ್ ವೃತ್ತಿಜೀವನ ಬಹುತೇಕ ಅಂತ್ಯಗೊಂಡಂತಾಗಿದೆ. ಅಂದಹಾಗೆ ಕೆಳ ನ್ಯಾಯಾಲಯ `ಖಂಡನೀಯ ಹತ್ಯೆ' ಆರೋಪದಡಿ 5 ವರ್ಷ ಸೆರೆವಾಸ ವಿಧಿಸಿತ್ತು. ಅದರ ವಿರುದ್ಧ ರೀವಾ  ಪೋಷಕರು ಮೇಲ್ಮನವಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!