ಕೆ. ಶ್ರೀಕಾಂತ್ 
ಕ್ರೀಡೆ

ಶ್ರೀಕಾಂತ್ ಫೈನಲ್ ಪ್ರವೇಶ

ಭಾರತದ ಯುವ ಬ್ಯಾಡ್ಮಿಂಟನ್ ಆಟಗಾರ ಕೆ. ಶ್ರೀಕಾಂತ್ ಇಂಡೋನೇಷಿಯಾ ಮಾಸ್ಟರ್ಸ್ ಗ್ರಾಂಡ್ ಪ್ರಿಕ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ...

ಮಲಾಂಗ್  : ಭಾರತದ ಯುವ ಬ್ಯಾಡ್ಮಿಂಟನ್ ಆಟಗಾರ ಕೆ. ಶ್ರೀಕಾಂತ್ ಇಂಡೋನೇಷಿಯಾ ಮಾಸ್ಟರ್ಸ್ ಗ್ರಾಂಡ್ ಪ್ರಿಕ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಪ್ರಶಸ್ತಿ ಸುತ್ತಿಗೆ  ಧಾವಿಸಿದ್ದಾರೆ. ಆದರೆ, ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಪಿ.ವಿ. ಸಿಂಧು ಅವರ ಹೋರಾಟಕ್ಕೆ ತೆರೆಬಿದ್ದಿದೆ. ಇಲ್ಲಿನ ಗೆಡುಂಗ್ ಗ್ರಾಹ ಚಕ್ರವಾಲದಲ್ಲಿ ನಡೆಯುತ್ತಿರುವ 120,000 ಡಾಲರ್ ಮೊತ್ತದ ಪಂದ್ಯಾವಳಿಯಲ್ಲಿ ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಅಗ್ರ ಶ್ರೇಯಾಂಕಿತ ಶ್ರೀಕಾಂತ್ ಸ್ಥಳೀಯ ಆಟಗಾರ ಗಿಂಟಿಂಗ್ ಆಂಟನಿ ವಿರುದ್ಧ 21-13, 21-19ರ ಎರಡು ನೇರ ಗೇಮ್ ಗಳಲ್ಲಿ ಗೆಲುವು ಸಾಧಿಸಿ ಫೈನಲ್‍ಗೆ  ಅರ್ಹತೆ ಪಡೆದರು. ಕೇವಲ 37 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಮೊದಲ ಗೇಮ್  ಅನ್ನು ಸುನಾಯಾಸವಾಗಿ ಜಯಿಸಿದ ಶ್ರೀಕಾಂತ್,ಎರಡನೇ ಗೇಮ್ ನಲ್ಲಿ ತುಸು ಪೈಪೋಟಿಯನ್ನು ಎದುರಿಸಬೇಕಾಯಿತು. ಈ ಗೆಲುವಿನೊಂದಿಗೆ ಗುಂಟೂರು ಮೂಲದ ಶ್ರೀಕಾಂತ್ ಆಂಟನಿ ವಿರುದ್ಧದ ವೃತ್ತಿಬದುಕಿನ ಮುಖಾಮುಖಿಯಲ್ಲಿ  1-1ರ ಸಮಬಲ ಸಾಧಿಸಿದ್ದಾರೆ. 
ಸಿಂಧುಗೆ ನಿರಾಸೆ: ಇನ್ನು ಮಕಾವ್ ಓಪನ್  ಗ್ರಾಂಡ್ ಪ್ರಿಕ್ಸ್ ಗೋಲ್ಡ್ ಟೂರ್ನಿಯಲ್ಲಿಗೆಲುವು ಸಾಧಿಸಿ ಮಿಂಚು ಹರಿಸಿದ್ದ ಪಿ.ವಿ. ಸಿಂಧು ಕ್ವಾರ್ಟರ್ ಫೈನಲ್‍ನಲ್ಲಿ ಚೀನಾದ ಹೀ
ಬಿಂಗ್ಜಿಯಾವೊ ವಿರುದ್ಧ 23-21, 13-21ರಿಂದ ಸೋತು ಟೂರ್ನಿಯಿಂದ ಹೊರಬಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ