ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ ಗಳಲ್ಲಿ ಶತಕ ಸಿಡಿಸಿದ ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‍ಮನ್ ಅಜಿಂಕ್ಯ ರಹಾನೆ, ಪಂದ್ಯದ ನಂತರ ತಮಗೆ ನೀಡಲಾದ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಚೆನ್ನೈ ಜನತೆ ಹಾಗೂ ದೇಶದಲ್ಲಿ ಗಡಿ ಕಾಯುತ್ತಿರುವ ಸೈನಿಕರಿಗೆ ಅರ್ಪಿಸಿದ್ದಾರೆ.