ಶಶಾಂಕ್ ಮನೋಹರ್ 
ಕ್ರೀಡೆ

ಫೆ.9 ರಿಂದ ಐಪಿಎಲ್ ಪಂದ್ಯ ಆರಂಭ: ಆಟಗಾರರ ಹರಾಜು ಬೆಂಗಳೂರಿನಲ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್ ನ 2016 ನೇ ಸಾಲಿನ ಪಂದ್ಯಗಳು ಏಪ್ರಿಲ್ 9 ರಂದು ಆರಂಭಗೊಂಡು ಮೇ 29 ರವರೆಗೆ ನಡೆಯಲಿದೆ ಎಂದು ಬಿಸಿಸಿಐ ಪ್ರಕಟಿಸಿದೆ.

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ನ 2016 ನೇ ಸಾಲಿನ ಪಂದ್ಯಗಳು ಏಪ್ರಿಲ್ 9 ರಂದು ಆರಂಭಗೊಂಡು ಮೇ 29 ರವರೆಗೆ ನಡೆಯಲಿದೆ ಎಂದು ಬಿಸಿಸಿಐ ಪ್ರಕಟಿಸಿದೆ.

ಸಿಎಸ್ ಕೆ ಮತ್ತು ರಾಜಸ್ತಾನ ರಾಯಲ್ಸ್ ತಂಡಗಳು ಎರಡು ವರ್ಷ ಐಪಿಎಲ್ ನಿಂದ ಅಮಾನತುಗೊಂಡಿರುವ ಹಿನ್ನೆಲೆಯಲ್ಲಿ ಹೊಸ ತಂಡಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದ ಬೆನ್ನಲ್ಲೇ ಆಟಗಾರರ ಹರಾಜು ದಿನಾಂಕ, ಟೂರ್ನಿಯ ಅವಧಿಯನ್ನು ಪ್ರಕಟಿಸಿದೆ.

ಬೆಂಗಳೂರಿನಲ್ಲಿ ಐಪಿಎಲ್ ಸೀಸನ್ 9ರ ಆಟಗಾರರ ಹರಾಜು ಪ್ರಕ್ರಿಯೆ ಫೆಬ್ರವರಿ 6ರಂದು ನಡೆಯಲಿದೆ. ಪುಣೆ ಹಾಗೂ ರಾಜ್ ಕೋಟ್ ಮುಂದಿನ ಎರಡು ವರ್ಷಗಳ ಕಾಲ ಐಪಿಎಲ್ ನಲ್ಲಿ ಆಡಲಿವೆ.

ಹರಾಜು ಪ್ರಕ್ರಿಯೆಯಲ್ಲಿ ಪುಣೆ ತಂಡಕ್ಕೆ ಹರಾಜು ಕೂಗುವ ಮೊದಲ ಅವಕಾಶ ನೀಡಲಾಗಿದೆ ಎಂದು ಬಿಸಿಸಿಐ ಹೇಳಿದೆ. ಎಂಎಸ್ ಧೋನಿ ಸೇರಿದಂತೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಆಟಗಾರರು ಫೆಬ್ರವರಿ 6ರಂದು ನಡೆಯಲಿರುವ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅರ್ಹರಾಗಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್