ಬಿಐಎ ನೆರವಿಗೆ ಸುಪ್ರೀಂ
ಜನವರಿ 2ರಿಂದ ಆರಂಭವಾಗಲಿರುವ ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್ (ಪಿಬಿಎಲ್) ಟೂರ್ನಿಗೆ ಮೇಘಾಲಯ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ತಡೆ ಹಿಡಿದು ಟೂರ್ನಿಗೆ ಗ್ರೀನ್ ಸಿಗ್ನಲ್ ನೀಡಿದೆ.
ನವದೆಹಲಿ: ಮುಂಬರುವ ಜನವರಿ 2ರಿಂದ ಆರಂಭವಾಗಲಿರುವ ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್ (ಪಿಬಿಎಲ್) ಟೂರ್ನಿಗೆ ಮೇಘಾಲಯ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ತಡೆ ಹಿಡಿದು ಟೂರ್ನಿಗೆ ಗ್ರೀನ್ ಸಿಗ್ನಲ್ ನೀಡಿದೆ.
ಹಾಗಾಗಿ ಸುಪ್ರೀಂಕೋರ್ಟ್ ತೀರ್ಪನ್ನು ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ ಶ್ಲಾಘಿಸಿದೆ. ಶೋಭಗಯ ಮಿಡಿಯಾ ಪ್ರೈ. ಲಿಮಿಟೆಡ್, ಫ್ರಾಂಚೈಸಿಗಳ ಮಾನ್ಯತೆ ಕುರಿತಂತೆ ಮೇಘಾಲಯ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆಗಾಗಿ ಹೈಕೋರ್ಟ್ ಟೂರ್ನಿಗೆ ತಡೆಯಾಜ್ಞೆ ನೀಡಿತ್ತು. ಮಂಗಳವಾರ ಹೈಕೋರ್ಟ್ ತೀರ್ಪು ಹೋಬರುತ್ತಿದ್ದಂತೆ ಈ ತೀರ್ಪನ್ನು ತಡೆ ಹಿಡಿಯ ಬೇಕು ಎಂದು ಬಿಎಐ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಬುಧವಾರ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪಿಗೆ ತಡೆ ನೀಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.