ಬ್ರೆಂಡನ್ ಮೆಕ್ಕಲಮ್ 
ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಬ್ರೆಂಡನ್ ಮೆಕ್ಕಲಮ್

ನ್ಯೂಜಿಲೆಂಡ್ ಕ್ರಿಕೆಟ್ ತಂಡದ ನಾಯಕ ಬ್ರೆಂಡನ್ ಮೆಕ್ಕಲಮ್ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದುತ್ತಿರುವುದಾಗಿ ಪ್ರಕಟಿಸಿದ್ದಾರೆ. ...

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಕ್ರಿಕೆಟ್ ತಂಡದ ನಾಯಕ ಬ್ರೆಂಡನ್ ಮೆಕ್ಕಲಮ್ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದುತ್ತಿರುವುದಾಗಿ ಪ್ರಕಟಿಸಿದ್ದಾರೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಎರಡು ಟೆಸ್ಟ್ ಸರಣಿ ಬಳಿಕ ನಿವೃತ್ತಿ ಹೊಂದುವುದಾಗಿ ತಿಳಿಸಿದ್ದಾರೆ.

34 ವರ್ಷದ  ಸ್ಫೋಟಕ ಬ್ಯಾಟ್ಸ್ ಮನ್ ಬ್ರೆಂಡನ್ ಮೆಕ್ಕಲಮ್ ವಿಶ್ವಕಪ್ ಟ್ವೆಂಟಿ 20 ಟೂರ್ನಿಯ ಬಳಿಕ ನಿವೃತ್ತಿಯ ಬಗ್ಗೆ ತಿಳಿಸಬೇಕೆಂದುಕೊಂಡಿದ್ದೆ. ಆದರೆ ಇದೇ ಸಕಾಲ ಎನಿಸಿದ ಹಿನ್ನೆಲೆಯಲ್ಲಿ ತಿಳಿಸುತ್ತಿದ್ದೇನೆ ಎಂದು ಹೇಳಿದರು.

ನ್ಯೂಜಿಲೆಂಡ್  ಪರ ಇಷ್ಟು ವರ್ಷ ಆಡಿರುವುದಕ್ಕೆ ಹೆಮ್ಮೆ ಎನಿಸುತ್ತದೆ. ಹೊಸಬರಿಗೆ ಅವಕಾಶ ಕೊಡುವ ನಿಟ್ಟಿನಲ್ಲಿ ಈ ನಿರ್ಧಾರ ಅನಿವಾರ್ಯ ಎಂದು ಹೇಳಿದ್ದಾರೆ.

2004 ರಲ್ಲಿ ವಿಕೆಟ್ ಕೀಪರ್, ಬ್ಯಾಟ್ಸಮನ್ ಆಗಿ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ ಬಳಿಕ ನಾಯಕನಾಗಿ ತಂಡ ಮುನ್ನಡೆಸಿದ ಕೀರ್ತಿ ಮೆಕ್ಕಲಮ್ ಅವರದ್ದಾಗಿದೆ. ಮೆಕ್ಕಲಮ್ ಅಡಿರುವ 99 ಟೆಸ್ಟ್ ಪಂದ್ಯಗಳಿಂದ 6,273 ರನ್ ಗಳಿಸಿದ್ದಾರೆ. 11 ಶತಕ ಸಿಡಿಸಿ ಸರಾಸರಿ 38.48 ರಲ್ಲಿ ನ್ಯೂಜಿಲೆಂಡ್ ನಾಯಕರ ವೈಯಕ್ತಿಕ ಸಾಧನೆಯ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.

ಕಳೆದ ವರ್ಷ ವೆಲ್ಲಿಂಗ್ಟನ್​ನಲ್ಲಿ ಭಾರತದ ವಿರುದ್ಧ (302) ತ್ರಿಶತಕ ಸಾಧನೆ ಮಾಡಿದ ನ್ಯೂಜಿಲೆಂಡ್​ನ ಏಕೈಕ ಬ್ಯಾಟ್ಸಮನ್ ಆಗಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ 254 ಪಂದ್ಯಗಳನ್ನಾಡಿ 5,909 ರನ್​ಗಳನ್ನು 30.30 ಸರಾಸರಿಯಲ್ಲಿ ಸಂಪಾದಿಸಿದ್ದಾರೆ. ಇನ್ನು 71 ಟ್ವೆಂಟಿ 20 ಪಂದ್ಯಗಳನ್ನಾಡಿ ಸರಾಸರಿ 35.66ನಿಂದ 2,140 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT