ಕ್ರೀಡೆ

ಸಯ್ಯದ್ ಕಿರ್ಮಾನಿಗೆ ಜೀವಮಾನ ಸಾಧನೆ ಪ್ರಶಸ್ತಿ

Lingaraj Badiger
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಾಜಿ ಕ್ರಿಕೆಟಿಗ ಸಯ್ಯದ್ ಕಿರ್ಮಾನಿ ಅವರನ್ನು 2015ನೇ ಸಾಲಿನ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ಆಯ್ಕೆ ಮಾಡಿದೆ.
ಈ ಸಂಬಂಧ ಇಂದು ಬಿಸಿಸಿಐ ಕೇಂದ್ರ ಕಚೇರಿಯಲ್ಲಿ ಸಭೆ ಸೇರಿದ್ದ ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್, ಕಾರ್ಯದರ್ಶಿ ಅನುರಾಗ್ ಠಾಕೂರ್ ಹಾಗೂ ದ ಹಿಂದೂ ಪತ್ರಿಕೆಯ ಸಂಪಾದಕ ಎನ್. ರಾಮ್ ಅವರನ್ನು ಒಳಗೊಂಡ ಪ್ರಶಸ್ತಿ ಆಯ್ಕೆ ಸಮಿತಿ, ನಾಯ್ಡು ವಾರ್ಷಿಕ ಪ್ರಶಸ್ತಿಗೆ ಕಿರ್ಮಾನಿ ಅವರ ಹೆಸರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
‌ಭಾರತ ಟೆಸ್ಟ್ ಕ್ರಿಕೆಟ್ ತಂಡದ ಮೊದಲ ನಾಯಕ ಕರ್ನಲ್ ಕೊಠಾರಿ ಕನಕಯ್ಯ ನಾಯ್ಡು ಅವರ ಜನ್ಮದಿನದ ಸ್ಮರಣಾರ್ಥ, ಕ್ರಿಕೆಟ್ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ಒಬ್ಬರಿಗೆ ಪ್ರತಿ ವರ್ಷ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಈ ಪ್ರಶಸ್ತಿಯು ಒಂದು ಟ್ರೋಫಿ, ಪ್ರಮಾಣಪತ್ರ ಹಾಗೂ 25 ಲಕ್ಷ ರುಪಾಯಿಯ ನಗದನ್ನು ಒಳಗೊಂಡಿದೆ.
SCROLL FOR NEXT