ನವದೆಹಲಿ: ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್ (ಪಿಬಿಎಲ್) ಪಂದ್ಯಾವಳಿಗಾಗಿ ಸಿದ್ಧಪಡಿಸಲಾಗಿರುವ ಧ್ಯೇಯಗೀತೆಯನ್ನು ಗುರುವಾರ ಬಿಡುಗಡೆಗೊಳಿಸಲಾಯಿತು.
ಹಿಂದಿ ಭಾಷೆಯಲ್ಲಿ ರಚಿತವಾಗಿರುವ ಈ ಗೀತೆಗೆ ಸಂಗೀತ ನಿರ್ದೇಶಕರಾದ ಸಲೀಮ್ ಸುಲೇಮಾನ್ ರಾಗ ಸಂಯೋಜನೆ ಮಾಡಿದ್ದಾರೆ. ಮುಂಬೈನಲ್ಲಿ ಶನಿವಾರ ಸಂಜೆ ನಡೆಯಲಿರುವ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದ ವೇಳೆ, ಈ ಗೀತೆಯನ್ನು ಸಂಗೀತ ನಿರ್ದೇಶಕರು ವೇದಿಕೆ ಮೇಲೆ ಹಾಡಿ ರಂಜಿಸಲಿದ್ದಾರೆ