ಸೋಮದೇವ್ ದೇವವರ್ಮನ್ 
ಕ್ರೀಡೆ

ಪ್ರಶಸ್ತಿ ಉಳಿಸಿಕೊಂಡ ಸೋಮ್

ಭಾರತದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ ಸೋಮದೇವ್ ದೇವವರ್ಮನ್ ದೆಹಲಿ ಓಪನ್ ಟೆನಿಸ್ ಟೂರ್ನಿಯ...

ದೆಹಲಿ: ಭಾರತದ ಅಗ್ರಮಾನ್ಯ ಸಿಂಗಲ್ಸ್ ಆಟಗಾರ ಸೋಮದೇವ್ ದೇವವರ್ಮನ್ ದೆಹಲಿ ಓಪನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಆ ಮೂಲಕ ಹಾಲಿ ಚಾಂಪಿಯನ್ ಘನತೆಯನ್ನು ಮುಂದುವರೆಸಿದ್ದಾರೆ.

ಭಾನುವಾರ ಇಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸೋಮದೇವ್, 3-6, 6-4, 6-0 ಸೆಟ್‌ಗಳಿಂದ ತಮ್ಮದೇ ದೇಶದ ಯುಕಿ ಭಾಂಬ್ರಿ ಅವರನ್ನು ಪರಾಭವಗೊಳಿಸಿ ಈ ಸಾಧನೆ ಮಾಡಿದರು. ಕಳೆದ ವರ್ಷ ಇದೇ ಟೂರ್ನಿಯಲ್ಲಿ ಪ್ರಶಸ್ತಿಯ ಗಡಿ ಮೂಡಿಸಿಕೊಂಡಿದ್ದ ಸೋಮದೇವ್, ಇಲ್ಲಿಯೂ ಆ ಸಾಧನೆ ಮಾಡುವಲ್ಲಿ ಹಿಂದೆ ಬೀಳಲಿಲ್ಲ.

ಸುಮಾರು ಎರಡೂವರೆ ಗಂಟೆ ಕಾಲ ನಡೆದ ಪಂದ್ಯದಲ್ಲಿ ಸೋಮದೇವ್ ಮುಂದೆ ಯುಕಿ ಭಾಂಬ್ರಿ ಕಠಿಣ ಸವಾಲುಗಳನ್ನೇ ನಿಲ್ಲಿಸಿದ್ದರು. ಮೊದಲ ಸೆಟ್ ಅನ್ನು ವಶಕ್ಕೆ ತೆಗೆದುಕೊಂಡಿದ್ದ ಯುಕಿ, ಎರಡನೇ ಸೆಟ್‌ನಲ್ಲಿ ಸಹ ಆರಂಭದಲ್ಲಿ 2-0ಯಿಂದ ಮುಂದೆ ಸಾಗಿದ್ದರು. ಆದರೆ, ನಂತರದಲ್ಲಿ ಚೇತರಿಸಿಕೊಂಡ ಸೋಮದೇವ್, ಅದ್ಬುತ ಲಯ ತೋರುವ ಮೂಲಕ ಮೈ ಕೊಡವಿ ಮೇಲೆದ್ದು ಬಂದು ಪ್ರಶಸ್ತಿ ಗೆದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?