ವಿನಯ್‌ಕುಮಾರ್‌ 
ಕ್ರೀಡೆ

ರಣಜಿ: ಕರ್ನಾಟಕ ವಿರುದ್ಧ ಮುಂಬೈ ಆಲೌಟ್; ವಿನಯ್ ಕುಮಾರ್ ಗೆ 6 ವಿಕೆಟ್

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಸೆಮಿಫೈನಲ್‌ನ ಮೊದಲ...

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಸೆಮಿಫೈನಲ್‌ನ ಮೊದಲ ಇನಿಂಗ್ಸ್‌ನಲ್ಲಿ ಮುಂಬೈ ತಂಡವನ್ನು 44 ರನ್‌ಗಳಿಗೆ ಆಲೌಟ್‌ ಮಾಡುವ ಮೂಲಕ ಕರ್ನಾಟಕ ತಂಡ ಮುಂಬೈ ಬ್ಯಾಟ್ಸ್ ಮನ್ ಗಳ ಬೆವರಿಳಿಸಿದೆ.
ಎರಡನೇ ಇನಿಂಗ್ಸ್ ಆರಂಭಿಸಿರುವ ಕರ್ನಾಟಕವು ದಿನದ ಆಟದ ಅಂತ್ಯಕ್ಕೆ 5 ಓವರ್ ಗಳಲ್ಲಿ 2 ವಿಕೆಟ್ ಗೆ 10 ರನ್ ಗಳಿಸಿದೆ.

ಮೊದಲು ಬ್ಯಾಟ್‌ ಮಾಡಿದ ಕರ್ನಾಟಕ ಎಲ್ಲ ವಿಕೆಟ್‌ ಕಳೆದುಕೊಂಡು 202 ರನ್‌ ಗಳಿಸಿತು. ರಾಬಿನ್‌ ಉತ್ತಪ್ಪ (68) ಗರಿಷ್ಠ ರನ್‌ ಗಳಿಸಿದರು. ಕರುಣ್‌ ನಾಯರ್‌ (49) ಔಟಾಗದೆ ಉಳಿದರು. ಕರ್ನಾಟಕ ತಂಡದ ನಾಯಕ ವಿನಯ್‌ಕುಮಾರ್‌ 6 ವಿಕೆಟ್‌ ಕಬಳಿಸಿದರು. ಅರವಿಂದ್‌ 2 ಹಾಗೂ ಅಭಿಮನ್ಯು ಮಿಥುನ್ 1ವಿಕೆಟ್‌ ಪಡೆದರು.

ಕರ್ನಾಟಕ ನೀಡಿದ 202 ರನ್‌ಗಳಿಗೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಮುಂಬೈ ತಂಡ ಒಂದರ ಬೆನ್ನಿಗೊಂದು ವಿಕೆಟ್‌ ಕಳೆದುಕೊಂಡಿತು.

ಕಳೆದ ವರ್ಷ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಎದುರು ಕರ್ನಾಟಕ ಗೆಲುವು ಸಾಧಿಸಿತ್ತು. ರಣಜಿ ಇತಿಹಾಸದಲ್ಲಿ ಮುಂಬೈ ವಿರುದ್ಧ ಕರ್ನಾಟಕ ಪಡೆದ ಚೊಚ್ಚಲ ಗೆಲುವು ಅದಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ