ಮುರಳಿ ವಿಜಯ್ 
ಕ್ರೀಡೆ

4ನೇ ಟೆಸ್ಟ್: ಶೂನ್ಯಕ್ಕೆ ಔಟಾದ ಮುರಳಿ ವಿಜಯ್

ಸಿಡ್ನಿ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಮೊದಲ ವಿಕೆಟ್ ಕಳೆದುಕೊಂಡಿದೆ. ಮುರಳಿ ವಿಜಯ್ ಮೊದಲ ಓವರ್ನಲ್ಲೇ ಶೂನ್ಯಕ್ಕೆ ಔಟಾಗಿದ್ದಾರೆ.

ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ನಲ್ಲಿ ಬೃಹತ್ ಮೊತ್ತ ಪೇರಿಸಿದೆ. ಏಳು ವಿಕೆಟ್ ನಷ್ಟಕ್ಕೆ ಆಸ್ಟ್ರೇಲಿಯಾ 527 ರನ್ ಗಳಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.

ಮೊದಲ ಇನಿಂಗ್ಸ್ ಪ್ರಾರಂಭಿಸಿದ ಭಾರತ ಪರ ಆಟಗಾರ ಮುರಳಿ ವಿಜಯ್ ಮೊದಲ ಓವರ್ನಲ್ಲೇ ಶೂನ್ಯಕ್ಕೆ ಔಟಾಗಿ ನಿರ್ಗಮಿಸಿದರು. ಆ ಬಳಿಕ ಲೋಕೆಶ್ ರಾಹುಲ್ ಹಾಗೂ ರೋಹಿತ್ ಶರ್ಮಾ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದು, 1 ವಿಕೆಟ್ ನಷ್ಟಕ್ಕೆ 71 ರನ್ ಗಳಿಸಿದೆ.

ರೋಜರ್ಸ್ 95 ರನ್ ಹೊಡೆದು ಮೊಹಮ್ಮದ್ ಶಮಿ ಎಸೆತದಲ್ಲಿ ಬೌಲ್ಡಾದರು. ವಾರ್ನರ್  101ರನ್ ಗಳಿಸಿದ್ದಾಗ ಅಶ್ವಿನ್ ಬೌಲಿಂಗ್‌ನಲ್ಲಿ ಮುರಳಿ ವಿಜಯ್‌ಗೆ ಕ್ಯಾಚ್ ನೀಡಿದರು. ವಾಟ್ಸನ್ 81 ರನ್ ಹೊಡೆದು ಶಮಿ ಬೌಲಿಂಗ್‌ನಲ್ಲಿ ಅಶ್ವಿನ್‌ಗೆ ಕ್ಯಾಚ್ ನೀಡಿ ನಿರ್ಗಮಿಸಿದರು.

ಸ್ಟೀವ್ ಸ್ಮಿತ್ ಅಬ್ಬರದ ಬ್ಯಾಟಿಂಗ್ ಮೂಲಕ ಒಂದೇ ಸರಣಿಯಲ್ಲಿ ಸತತ ನಾಲ್ಕು ಟೆಸ್ಟ್‌ಗಳಲ್ಲಿ ಶತಕ ಬಾರಿಸುವ ಮೂಲಕ  ಡಾನ್ ಬ್ರಾಡ್‌ಮನ್ ಮತ್ತು ಕ್ಯಾಲಿಸ್ ಸಾಲಿಗೆ ಸೇರಿಕೊಂಡು ಮೂರನೆಯ ಬ್ಯಾಟ್ಸ್‌ಮನ್ ಎನಿಸಿದರು.

ಸ್ಟೀವನ್ ಸ್ಮಿತ್ 117 ರನ್ ಹೊಡೆದು ತೇಜಸ್ವಿ ಯಾದವ್ ಬೌಲಿಂಗ್‌ನಲ್ಲಿ ಸಹಾಗೆ ಕ್ಯಾಚಿತ್ತು ಔಟಾದರು. ಅಡೆಲೈಡ್‌ನಲ್ಲಿ ಅವರ ಅಜೇಯ 162 ರನ್, ಬ್ರಿಸ್ಬೇನ್‌ನಲ್ಲಿ 133 ಮತ್ತು ಮೆಲ್ಬರ್ನ್‌ನಲ್ಲಿ 192 ರನ್ ಗಳಿಸುವ ಮೂಲಕ ಸತತ ನಾಲ್ಕು ಶತಕಗಳನ್ನು ಬಾರಿಸಿದ ಹೆಗ್ಗಳಿಕೆಗೆ ಪಾತ್ರರಾದರು.

ಭಾರತದ ಪರ ಮೊಹಮ್ಮದ್ ಶಮಿ 5 ವಿಕೆಟ್ ಪಡೆದರೆ, ಉಮೇಶ್ ಯಾದವ್ ಹಾಗೂ ಆರ್ ಅಶ್ವಿನ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

SIR ಅಕ್ರಮ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ