ವಿರಾಟ್ ಕೊಹ್ಲಿ 
ಕ್ರೀಡೆ

ಏಕದಿನ ರ್ಯಾಂಕಿಂಗ್: ಕೊಹ್ಲಿಗೆ 2ನೇ ಸ್ಥಾನ

ಭಾರತದ ಮಧ್ಯಮ ಕ್ರಮಾಂಕದ...

ದುಬೈ: ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ನೂತನ ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನದ ಗೌರವ ಪಡೆದಿದ್ದಾರೆ. ಜೊತೆಗೆ, ಶಿಖರ್ ಧವನ್ ಮತ್ತು ಮಹೇಂದ್ರ ಸಿಂಗ್ ಧೋನಿ ಕೂಡ ಅಗ್ರ 10ರೊಳಗೆ ಸ್ಥಾನ ಪಡೆದಿರುವ ಮತ್ತಿಬ್ಬರು ಆಟಗಾರರಾಗಿದ್ದಾರೆ.

ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧ ಸಿಡ್ನಿಯಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಮುನ್ನಡೆಸಿರುವ ಕೊಹ್ಲಿ, ಒಟ್ಟು 862 ಅಂಕಗಳನ್ನು ಸಂಪಾದಿಸಿದ್ದಾರೆ. ಅವರು, ಬ್ಯಾಟಿಂಗ್ ಕ್ರಮಾಂಕದಲ್ಲಿ ಅಗ್ರಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್‌ಗಿಂತ ಕೇವಲ 25 ಅಂಕಗಳ ಹಿನ್ನೆಡೆಯಲ್ಲಿದ್ದಾರೆ.

ಇನ್ನು ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ದಯನೀಯ ವೈಫಲ್ಯ ಅನುಭವಿಸಿರುವ ಆರಂಭಿಕ ಧವನ್, 5ನೇ ಕ್ರಮಾಂಕದಲ್ಲಿದ್ದರೆ, ಮಹೇಂದ್ರ ಸಿಂಗ್ ಧೋನಿ 10ನೇ ಕ್ರಮಾಂಕದ ಗೌರವ ಪಡೆದಿದ್ದಾರೆ. ಬೌಲರ್‌ಗಳ ವಿಭಾಗದಲ್ಲಿ ಭಾರತದ ಪರ ಮಾಧ್ಯಮ ವೇಗಿ ಭುವನೇಶ್ವರಕುಮಾರ್ ಮತ್ತು ಸ್ಪಿನ್ನರ್ ರವೀಂದ್ರ ಜಡೇಜಾ ಕ್ರಮವಾಗಿ 8ನೇ ಮತ್ತು 9ನೇ ರ್ಯಾಂಕಿಂಗ್‌ನಲ್ಲಿದ್ದಾರೆ. ವೆಸ್ಟ್ ಇಂಡೀಸ್ ಸ್ಪಿನ್ನರ್ ಸುನೀಲ್ ನಾರಾಯಣ್ ಮೊದಲ ಸ್ಥಾನ ಹೊಂದಿದ್ದಾರೆ.

ಪಾಕಿಸ್ತಾನದ ಸಯೀದ್ ಅಜ್ಮಲ್ ಮತ್ತು ದಕ್ಷಿಣ ಆಫ್ರಿಕಾದ ಡೇಲ್‌ಸ್ಟೇಯ್ನ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಗಳನ್ನು ಹಂಚಿಕೊಂಡಿದ್ದಾರೆ. ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಭಾರತದ ಪರ ಜಡೇಜಾ 6ನೇ ಕ್ರಮಾಂಕದಲ್ಲಿರುವುದೇ ಉತ್ತಮ ಸಾಧನೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!