ಪೋರ್ಚುಗಲ್‌ನ ಕ್ರಿಶ್ಚಿಯಾನೋ ರೋನಾಲ್ಡೋ ಡಿಒರ್ ಪ್ರಶಸ್ತಿಯೊಂದಿಗೆ (ಸಂಗ್ರಹ ಚಿತ್ರ) 
ಕ್ರೀಡೆ

ರೊನಾಲ್ಡೊಗೆ ಬ್ಯಾಲನ್ ಡಿಒರ್ ಪ್ರಶಸ್ತಿ

ಪೋರ್ಚುಗಲ್‌ನ ಕ್ರಿಶ್ಚಿಯಾನೋ ರೋನಾಲ್ಡೋ ಅವರು 2014ನೇ ಸಾಲಿನ ಫಿಫಾ ಬ್ಯಾಲನ್ ಡಿಒರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜ್ಯುರಿಚ್: ವಿಶ್ವದ ಖ್ಯಾತ ಫುಟ್‌ಬಾಲ್ ಆಟಗಾರ ಪೋರ್ಚುಗಲ್‌ನ ಕ್ರಿಶ್ಚಿಯಾನೋ ರೋನಾಲ್ಡೋ ಅವರು 2014ನೇ ಸಾಲಿನ ಫಿಫಾ ಬ್ಯಾಲನ್ ಡಿಒರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸೋಮವಾರ ರೊನಾಲ್ಡೋ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಮೂರನೇ ಬಾರಿಗೆ ಈ ಗೌರವ ಸಾಧನೆ ಮಾಡಿದ್ದಾರೆ. ಮತದಾನದ ಮೂಲಕ ವಿಶ್ವದ ಅತ್ಯುತ್ತಮ ಫುಟ್‌ಬಾಲ್ ಆಟಗಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ರೊನಾಲ್ಡೋ, ಖ್ಯಾತ ಪುಟ್ಬಾಲಿಗ ಲಿಯೋನಲ್ ಮೆಸ್ಸಿ ಅವರಿಗಿಂತ ದುಪ್ಪಟ್ಟು ಮತ ಪಡೆಯುವ ಮೂಲಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇನ್ನು ಎರಡನೇ ಸ್ಥಾನದಲ್ಲಿ ಅರ್ಜೆಂಟೀನಾದ ಲಿಯೋನಲ್ ಮೆಸ್ಸಿ ಹಾಗೂ ಮೂರನೇ ಸ್ಥಾನದಲ್ಲಿ ಜರ್ಮನಿಯ ಪ್ರತಿಭಾನ್ವಿತ ಗೋಲ್‌ಕೀಪರ್ ಮ್ಯಾನುಯೆಲ್ ನೂಯೆರ್ ಇದ್ದಾರೆ. ಇತ್ತೀಚಿನ ದಿನಗಳಲ್ಲಿ ರೊನಾಲ್ಡೋ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಜಾಗತಿಕ ಫುಟ್ಬಾಲ್‌ನಲ್ಲಿ ಹೆಚ್ಚು ಗಮನ ಸೆಳೆದಿರುವ ಅಟಾಗರರಾಗಿದ್ದಾರೆ. ಸತತ ಮೂರು ಬಾರಿ ಈ ಪ್ರಶಸ್ತಿ ಪಡೆದು ಹ್ಯಾಟ್ರಿಕ್ ಸಾಧನೆ ಮಾಡಿರುವ ರೊನಾಲ್ಡೊ ಹಾಗೂ ಫ್ರಾನ್ಸ್‌ನ ಜಿನೆಡಿನ್ ಜಿಡಾನ್ ಅವರೊಂದಿಗೆ ಸಮಬಲ ಸಾಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್