ಡೇವಿಡ್ ರಿಚರ್ಡ್‌ಸನ್ 
ಕ್ರೀಡೆ

ಅನುಚಿತ ವರ್ತನೆಗೆ ಬ್ರೇಕ್ ಹಾಕಲು ಚಿಂತನೆ

ದುಬೈ: ಮುಂಬರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಮೈದಾನದಲ್ಲಿ ಆಟಗಾರರ ಅನುಚಿತ ವರ್ತನೆ ಹಾಗೂ ಸ್ಲೆಡ್ಜಿಂಗ್ ಪ್ರಮಾಣವನ್ನು ನಿಯಂತ್ರಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಚಿಂತನೆ ನಡೆಸಿದೆ.

ಕಳೆದ ಆರು ತಿಂಗಳು ಅಥವಾ ಆ್ಯಶಸ್ ಸರಣಿಯ ಸಮಯದಿಂದ ಮೈದಾನದಲ್ಲಿ ಆಟಗಾರರು ಅನುಚಿತ ವರ್ತನೆ ಪ್ರದರ್ಶಿಸಿರುವ ಉದಾಹರಣೆಗಳು ಸಾಕಷ್ಟು ಕಂಡು ಬಂದಿದೆ. ಅಲ್ಲೆದ ಆಟಗಾರನೊಬ್ಬ ಮತ್ತೊಬ್ಬ ಆಟಗಾರನೊಂದಿಗೆ ಮಾತಿನ ಚಕಮಕಿ ನಡೆಸಿ ಸ್ಲೆಡ್ಜಿಂಗ್ ಮಾಡುವುದು ಉತ್ತಮ ಬೆಳವಣಿಗೆಯಲ್ಲ. ಈ ಹಿನ್ನೆಲೆಯಲ್ಲಿ ಅಂಪೈರ್ ಹಾಗೂ ಪಂದ್ಯಗಳ ರೆಫರಿ ಜತೆಗೆ ಸಾಕಷ್ಟು ಮಾತುಕತೆ ನಡೆಸಿದ್ದೇವೆ. ಮೈದಾನದಲ್ಲಿ ಆಟಗಾರರ ವರ್ತನೆ ನಿಯಂತ್ರಿಸಲು ನಿಯಮ ರೂಪಿಸಲು ಸಜ್ಜಾಗಿದ್ದೇವೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡೇವಿಡ್ ರಿಚರ್ಡ್‌ಸನ್ ತಿಳಿಸಿದ್ದಾರೆ.

ಕಳೆದ ಮೂರು ತಿಂಗಳಲ್ಲಿ ಐಸಿಸಿ ನಿಯಮಾವಳಿಯನ್ನು ಆಟಗಾರರು ಉಲ್ಲಂಘಿಸಿರುವ 12 ಪ್ರಕರಣಗಳು ದಾಖಲಾಗಿದೆ. ಹಾಗಾಗಿ ವಿಶ್ವಕಪ್‌ನಲ್ಲಿ ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಎಲ್ಲಾ ತಂಡಗಳಿಗೂ ಪಂದ್ಯಾವಳಿಗೂ ಮುನ್ನ ಪಂದ್ಯದ ರೆಫರಿಗಳು ಈ ಬಗ್ಗೆ ಸ್ಪಷ್ಟ ಎಚ್ಚರಿಕೆ ನೀಡಲಿದ್ದಾರೆ ಎಂದು ತಿಳಿಸಿದರು.

ಈ ಮೂಲಕ ವಿಶ್ವಕಪ್‌ನಲ್ಲಿ, ಕಟ್ಟುನಿಟ್ಟಿನ ನಿಯಮಗಳ ಮೂಲಕ ಆಟಗಾರರ ದುರ್ವರ್ತನೆ ನಿಯಂತ್ರಿಸಿ, ವಿಶ್ವಕಪ್ ಪಂದ್ಯಾವಳಿಯನ್ನು ಯಶಸ್ವಿಯಾಗಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಮಧ್ಯಾಹ್ನ 2.30ಕ್ಕೆ ರಾಜೀನಾಮೆ; ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT