ಆಸ್ಟ್ರೇಲಿಯಾ ಓಪನ್: ಭೂಪತಿ ಜೋಡಿಗೆ ಸೋಲು
ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ಮಹೇಶ್ ಭೂಪತಿ...
ಮೆರ್ಲ್ಬನ್: ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ಮಹೇಶ್ ಭೂಪತಿ ಹಾಗೂ ಆಸ್ಟ್ರೀಯಾ ಜುರ್ಗನ್ ಮೆಲ್ಜರ್ ಜೋಡಿ ನೇರ ಸೆಟ್ಗಳಿಂದ ಸೋಲು ಅನುಭವಿಸಿದೆ.
ಈ ಜೋಡಿ ಟೂರ್ನಿಯ ಮೊದಲ ಸುತ್ತಿನಲ್ಲಿಯೇ ಹೊರ ನಡೆದಿದೆ. ಇಂದು ನಡೆದ ಪಂದ್ಯದಲ್ಲಿ ಅರ್ಜೇಂಟೀನಾ ಡೈಗೊ ಸ್ವಾರೆಜ್-ಹೊರೈಸ್ ಜೆಬಾಲ್ಲೊಸ್ ಜೋಡಿ 6-4, 6-3 ನೇರ ಸೆಟ್ಗಳಿಂದ ಭೂಪತಿ-ಮೆಲ್ಜರ್ ಜೋಡಿ ಪರಾಭವಗೊಂಡಿದೆ.
ಇತ್ತೀಚೆಗೆ ನಡೆದ ಚೆನ್ನೈ ಓಪನ್ ಟೆನಿಸ್ ಟೂರ್ನಿಯಲ್ಲೂ ಭೂಪತಿ ಅವರು ಎರಡನೇ ಸುತ್ತಿನಲ್ಲೇ ನಿರ್ಗಮಿಸಿದ್ದರು. ಒಂಬತ್ತು ತಿಂಗಳ ವಿರಾಮದ ಬಳಿಕ ಅಂಗಳಕ್ಕೆ ಮರಳಿರುವ ಭೂಪತಿ ಲಯ ಕಂಡುಕೊಳ್ಳುವಲ್ಲಿ ವಿಫಲರಾಗುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.