ಕ್ರೀಡೆ

ವಿಶ್ವಕಪ್ ಕ್ರಿಕೆಟ್ ಆಟಗಾರನಿಗೆ ಬ್ಲಾಕ್ ಮೇಲ್: ಆರೋಪಿ ಬಂಧನ

ಮಹಿಳೆಯೊಬ್ಬರೊಂದಿಗೆ ಅನೈತಿಕ ಸಂಬಂಧವಿಟ್ಟುಕೊಂಡಿರುವ ಬಗ್ಗೆ ಮಾಧ್ಯಮಗಳ ಮುಂದೆ...

ಮಹಿಳೆಯೊಬ್ಬರೊಂದಿಗೆ ಅನೈತಿಕ ಸಂಬಂಧವಿಟ್ಟುಕೊಂಡಿರುವ ಬಗ್ಗೆ ಮಾಧ್ಯಮಗಳ ಮುಂದೆ ಬಹಿರಂಗಗೊಳಿಸಬಾರದೆಂದರೆ ಕೇಳಿದಷ್ಟು ಹಣ ನೀಡಬೇಕು ಎಂದು ವಿಶ್ವಕಪ್ ಕ್ರಿಕೆಟ್ ಆಟಗಾರನಿಗೆ ಬ್ಲಾಕ್ ಮೇಲ್ ಮಾಡಿರುವ ಘಟನೆ ವರದಿಯಾಗಿದೆ.

ವಿಶ್ವಕಪ್ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ಆಟವಾಡುತ್ತಿರುವ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮೋರ್ಗನ್ ಅವರು ಐದು ವರ್ಷಗಳ ಹಿಂದೆ ಮಹಿಳೆಯೊಬ್ಬರೊಂದಿಗೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದರೆಂಬ ಕಾರಣಕ್ಕೆ ಅವರನ್ನು ಆಸ್ಟ್ರೇಲಿಯಾ ವ್ಯಕ್ತಿಯೊಬ್ಬ ಬ್ಲಾಕ್ ಮೇಲೆ ಮಾಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕ್ರಿಕೆಟಿಗೆ ಇಯಾನ್ ಅವರು ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದನೆನ್ನಲಾಗಿದ್ದು, ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ, ಇಯಾನ್‌ಗೆ ಆ ವ್ಯಕ್ತಿ ಈಮೇಲ್ ಕಳುಹಿಸಿದ್ದಾನೆ. ಈ ಸಂಬಂಧವನ್ನು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಮಾಧ್ಯಮಗಳಿಗೆ ಬಹಿರಂಗಪಡಿಸಬಾರದೆಂದರೆ ಐದಂಕಿ ಮೊತ್ತದ ಹಣ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದನು.

ಇಯಾನ್ ಅವರು ಈ ವಿಷಯವನ್ನು ತಂಡದ ಮ್ಯಾನೇಜರ್ ಅವರಿಗೆ ತಿಳಿಸಿ, ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಬ್ಲಾಕ್ ಮೇಲ್ ಮಾಡಿದ ವ್ಯಕ್ತಿಯನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!