ವಿಜೇಂದರ್ ಸಿಂಗ್ 
ಕ್ರೀಡೆ

ನ್ಯಾಷನಲ್ ಗೇಮ್ಸ್‌ನಲ್ಲಿ ವಿಜೇಂದರ್ ಭಾಗವಹಿಸಲ್ಲ

ಮೂಗಿಗೆ ಗಾಯವಾಗಿರುವ ಕಾರಣ ಭಾರತದ ಬಾಕ್ಸಿಂಗ್ ಪಟು ವಿಜೇಂದರ್ ಸಿಂಗ್ ಈ ಬಾರಿ ನ್ಯಾಷನಲ್ ಗೇಮ್ಸ್‌ನಲ್ಲಿ...

ತಿರುವನಂತಪುರಂ: ಮೂಗಿಗೆ ಗಾಯವಾಗಿರುವ ಕಾರಣ ಭಾರತದ ಬಾಕ್ಸಿಂಗ್ ಪಟು ವಿಜೇಂದರ್ ಸಿಂಗ್ ಈ ಬಾರಿ ನ್ಯಾಷನಲ್ ಗೇಮ್ಸ್‌ನಲ್ಲಿ ಭಾಗವಹಿಸುವುದಿಲ್ಲ.

ಮೂಗಿಗೆ ಗಾಯಗಳಾಗಿರುವ ಕಾರಣ ಏಷ್ಯನ್ ಗೇಮ್ಸ್‌ನಲ್ಲಿಯೂ ಭಾಗವಹಿಸಲು ಸಾಧ್ಯವಾಗಿಲ್ಲ. ಕೆಲವು ದಿನಗಳ ಹಿಂದೆ ಅಭ್ಯಾಸ ನಡೆಸುತ್ತಿದ್ದ ವೇಳೆ ಮತ್ತೆ ನೋವು ಕಾಣಿಸಿಕೊಂಡಿತ್ತು ಎಂದು ವಿಜೇಂದರ್ ಹೇಳಿದ್ದಾರೆ. ಇದು ದೊಡ್ಡ ಗಾಯವೇನೂ ಅಲ್ಲ ಆದರೆ ನಾನು ಎಚ್ಚರಿಕೆ ವಹಿಸಬೇಕಾಗಿದೆ. ಈ ಗಾಯಗಳನ್ನು  ಲೆಕ್ಕಿಸದೆ ಕ್ರೀಡೆಯಲ್ಲಿ ಭಾಗವಹಿಸಿ ಇನ್ನಷ್ಟು ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಳ್ಳಲು ನಾನು ಬಯಸುವುದಿಲ್ಲ. ಆದ್ದರಿಂದಲೇ ನಾನು ನ್ಯಾಷನಲ್ ಗೇಮ್ಸ್‌ನಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ. ಇನ್ನೊಂದಷ್ಟು ದಿನದ ನಂತರ ನಾನು ಮರಳಿ ಬರುವೆ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಗ್ಲಾಸ್ಗೋನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ 29ರ ಹರೆಯದ ವಿಜೇಂದರ್ ಬೆಳ್ಳಿ ಪದಕ ಗೆದ್ದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!