ನವದೆಹಲಿ: ಜಿಂಬಾಬ್ವೆ ಪ್ರವಾಸಕ್ಕೆ ಆ ಟೀಂ ಇಂಡಿಯಾದಲ್ಲಿ ಮತ್ತೆ ಸ್ಥಾನ ಪಡೆದಿರುವ ಕರ್ನಾಟಕದ ಆಟಗಾರ ರಾಬಿನ್ ಉತ್ತಪ್ಪ, ಈ ಅವಕಾಶವನ್ನು ಬಳಸಿಕೊಂಡು ಉತ್ತಮ ಪ್ರದರ್ಶನ ನೀಡುವುದಾಗಿ ತಿಳಿಸಿದ್ದಾರೆ.
ಸಾಕಷ್ಟು ಸಮಯದಿಂದ ಈ ಅವಕಾಶಕ್ಕಾಗಿ ಎದುರು ನೋಡುತ್ತಿದ್ದೆ. ಹಾಗಾಗಿ ಈ ಅವಕಾಶವನ್ನು ಸಾಧ್ಯವಾದಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ವಿಶ್ವಾಸವಿದೆ. ಈ ಹಿಂದೆ ನನಗೆ ಸಿಕ್ಕ
ಅವಕಾಶದಲ್ಲಿ ಒಂದೆರಡು ಪಂದ್ಯಗಳನ್ನಾಡುತ್ತಿದ್ದೆ. ಈ ಬಾರಿ ಪೂರ್ಣ ಸರಣಿ ಆಡುತ್ತಿರುವುದು ಸಾಮರ್ಥ್ಯ ತೋರಲು ಉತ್ತಮ ವೇದಿಕೆಯಾಗಿದೆ ಎಂದು ರಾಬಿನ್ ಉತ್ತಪ್ಪ ತಿಳಿಸಿದ್ದಾರೆ.