ಸುರೇಶ್ ರೈನಾ 
ಕ್ರೀಡೆ

ತಪ್ಪು ಕೆಲಸಕ್ಕೆ ಕೈ ಹಾಕಿಲ್ಲ: ಸುರೇಶ್ ರೈನಾ

ಐಪಿಎಲ್ ನ ಮಾಜಿ ಆಯುಕ್ತ ಲಲಿತ್ ಮೋದಿ ಮಾಡಿರುವ ಆರೋಪವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಸುರೇಶ್ ರೈನಾ ಅಲ್ಲಗಳೆದಿದ್ದಾರೆ.

ನವದೆಹಲಿ: ಐಪಿಎಲ್ ಟೂರ್ನಿಯಲ್ಲಿ ಉದ್ದಿಮೆದಾರರೊಬ್ಬರ ಬಳಿ ಲಂಚ ಪಡೆದಿರುವುದಾಗಿ ಐಪಿಎಲ್ ನ ಮಾಜಿ ಆಯುಕ್ತ ಲಲಿತ್ ಮೋದಿ ಮಾಡಿರುವ ಆರೋಪವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಸುರೇಶ್ ರೈನಾ ಅಲ್ಲಗಳೆದಿದ್ದಾರೆ.

ನನ್ನ ಬಗ್ಗೆ ಮಾಧ್ಯಮಗಳಲ್ಲಿ ಲಂಚ ಸ್ವೀಕರಿಸಿರುವ ವರದಿಗಳು ಪ್ರಕಟವಾಗಿರುವುದರಿಂದ ವಿಶ್ವದೆಲ್ಲೆಡೆ ಇರುವ ನನ್ನ ಅಭಿಮಾನಿಗಳಿಗೆ ಸ್ಪಷ್ಟನೆ ನೀಡಲು ಇಚ್ಛಿಸುತ್ತೇನೆ. ನಾನು ಕ್ರೀಡೆಯನ್ನು ಎಂದಿಗೂ ಉತ್ತಮ ಸ್ಪೂರ್ತಿಯಿಂದ ಆಡಿದ್ದು, ಪ್ರಾಮಾಣಿಕತೆ ಕಾಪಾಡಿಕೊಂಡಿದ್ದೇನೆ. ನಾನೆಂದೂ ತಪ್ಪು ಕೆಲಸಕ್ಕೆ ಕೈಹಾಕಿಲ್ಲ. ನನ್ನ ಮೇಲೆ ಬಂದಿರುವ ಆರೋಪಗಳು ಸುಳ್ಳು ಮಾಮಿ ಯಾವುದೇ ತಂಡವನ್ನು ಪ್ರತಿನಿಧಿಸಿದರು ಆ ತಂಡಕ್ಕೆ ಉತ್ತಮವಾಗಿ ಆಡುವ ಬಗ್ಗೆ ಯೋಚಿಸುತ್ತೇನೆ.

ಈ ವಿಷಯದಲ್ಲಿ ಮುಂದಿನ ಹೆಜ್ಜೆ ಇಡಲು ಕಾನೂನು ಸಲಹೆಗಾರರ ನೆರವು ಪಡೆಯುತ್ತಿದ್ದೇನೆ ಎಂದು ರೈನಾ ಹೇಳಿದ್ದಾರೆ. ಐಪಿಎಲ್ ನಲ್ಲಿ ಭಾರತದ ಇಬ್ಬರು ಆಟಗಾರರು ಮತ್ತು ವೆಸ್ಟ್ ಇಂಡೀಸ್ ನ ಓರ್ವ ಆಟಗಾರ ರಿಯಲ್ ಎಸ್ಟೇಟ್ ಉದ್ದಿಮೆದಾರ ಹಾಗೂ ಬುಕ್ಕಿಯಿಂದ ಲಂಚ ಸ್ವೀಕರಿಸಿದ್ದಾರೆ ಎಂದು ಲಲಿತ್ ಮೋದಿ ಇತ್ತೀಚೆಗಷ್ಟೇ ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!