ಬಾಗ್ ಪಥ್: ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕ್ರಿಕೆಟಿಗರ ಪಾತ್ರವಿಲ್ಲ ಎಂದು ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಸುರೇಶ್ ರೈನಾ ಹೇಳಿದ್ದಾರೆ.
ದೆಹಲಿಯಲ್ಲಿರುವ ಬಾಮನೌಲಿ ಗ್ರಾಮದಲ್ಲಿ ತಮ್ಮ ಸಂಬಂಧಿಕರ ಮನೆಗೆ ಪತ್ನಿಯೊಂದಿಗೆ ಆಗಮಿಸಿದ್ದ ಸುರೇಶ್ ರೈನಾ ಅವರು ನಾಗೇಶ್ವರ್ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಮಾತನಾಡಿದ ಸುರೇಶ್ ರೈನಾ, ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕ್ರಿಕೆಟಿಗರದು ಯಾವುದೇ ರೀತಿಯ ಪಾತ್ರವಿಲ್ಲ. ಹಾಗಾಗಿ ಅವರ ಮೇಲೆ ಯಾವ ರೀತಿಯ ಪರಿಣಾಮ ಬೀರಿಲ್ಲ ಎಂದು ರೈನಾ ಹೇಳಿದ್ದಾದರೆ.
2013ರಲ್ಲಿ ನಡೆದ ಐಪಿಎಲ್ ಸ್ಫಾಟ್ ಫಿಕ್ಸಿಂಗ್ ಪ್ರಕರಣದಿಂದ ಕ್ರಿಕೆಟಿಗರಾದ ಶ್ರೀಶಾಂತ್, ಅಜಿತ್ ಚಂಡಿಲಾ ಮತ್ತು ಅಂಕೀತ್ ಚವ್ಹಾಣ್ ಅವರನ್ನು ಖುಲಾಸೆಗೊಳಿಸುವುದರ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಯೊಂದಕ್ಕೆ ಈ ರೀತಿ ಉತ್ತರಿಸಿದ್ದಾರೆ.