ರಾಹುಲ್ ದ್ರಾವಿಡ್ 
ಕ್ರೀಡೆ

ಟೀಂ ಇಂಡಿಯಾ ಕೋಚ್ ಆಗಲು ಸದ್ಯಕ್ಕೆ ಆಸಕ್ತಿ ಇಲ್ಲ: ರಾಹುಲ್

ಪ್ರಸ್ತುತ ಸಂದರ್ಭದಲ್ಲಿ ಟೀಂ ಇಂಡಿಯಾದ ಕೋಚ್ ಆಗಲು ನನಗೆ ಆಸಕ್ತಿ ಇಲ್ಲ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

ನವದೆಹಲಿ: ಪ್ರಸ್ತುತ ಸಂದರ್ಭದಲ್ಲಿ ಟೀಂ ಇಂಡಿಯಾದ ಕೋಚ್ ಆಗಲು ನನಗೆ ಆಸಕ್ತಿ ಇಲ್ಲ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ. ಇಂಡಿಯಾ ಎ, ಅಂಡರ್ -19 ಟೀಂನ ಕೋಚ್ ಆಗಿ ನೇಮಕಗೊಂಡ ನಂತರ ಮಾಧ್ಯಮದವರಲ್ಲಿ ಮಾತನಾಡಿದ ರಾಹುಲ್ ಈ ರೀತಿ ಹೇಳಿದ್ದಾರೆ.

ನಾನೀಗ ಇಂಡಿಯಾ ಎ ಮತ್ತು ಅಂಡರ್-19 ತಂಡಗಳಿಗೆ ತರಬೇತಿ ನೀಡುವ ಬಗ್ಗೆ ಸಿದ್ಧತೆ ನಡೆಸುತ್ತಿದ್ದೇನೆ. ಈ ವೇಳೆ ಟೀಂ ಇಂಡಿಯಾದ ಕೋಚ್ ಆಗುವ ಬಗ್ಗೆ ನಾನು ಯೋಚಿಸುವುದೇ ಇಲ್ಲ ಎಂದು ರಾಹುಲ್ ಹೇಳಿದ್ದಾರೆ.

ಟೀಂ ಇಂಡಿಯಾದ ಕೋಚ್ ಸ್ಥಾನಕ್ಕೆ ರಾಹುಲ್ ನೇಮಕ ಆಗುವ ಸಾಧ್ಯತೆ ಇದೆ ಎಂಬ ಸುದ್ದಿಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಟೀಂ ನಿರ್ದೇಶಕರಾಗಿಯೂ, ತಾತ್ಕಾಲಿಕ ಕೋಚ್ ಆಗಿಯೂ ರವಿ ಶಾಸ್ತ್ರಿ ಮತ್ತು ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತಿದೆ ಎಂದು ರಾಹುಲ್ ಹೇಳಿದ್ದಾರೆ.

ಇಂಡಿಯಾ ಎ, ಅಂಡರ್-19  ತಂಡದ ಜತೆ ಕಾರ್ಯ ನಿರ್ವಹಿಸುವುದು ದೊಡ್ಡ ಜವಾಬ್ದಾರಿಯಾಗಿದೆ. ಈ ಜವಾಬ್ದಾರಿ ವಹಿಸಿಕೊಂಡಿರುವುದಕ್ಕೆ ಸಂತೋಷವಿದೆ. ನನ್ನ ಅನುಭವಗಳು ಕಿರಿಯರಿಗೆ ಪ್ರಯೋಜನವಾಗುವಂತೆ  ಕೆಲಸ ನಿರ್ವಹಿಸಲು ನನಗಿಷ್ಟ ಎಂದು ರಾಹುಲ್ ಹೇಳಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್