ಭಾರತ ಕ್ರಿಕೆಟ್ ತಂಡದ ಆಟಗಾರರು 
ಕ್ರೀಡೆ

ಪ್ರಬಲ ಭಾರತಕ್ಕೆ ಬಾಂಗ್ಲಾ ಸವಾಲು

ಬಾಂಗ್ಲಾದೇಶವನ್ನು ಲಘುವಾಗಿ ಪರಿಗಣಿಸದೇ ಸಂಪೂರ್ಣ ಶಸ್ತ್ರಾಸ್ತ್ರಗಳೊಂದಿಗೆ ಕಣಕ್ಕಿಳಿಯುತ್ತಿರುವ ಭಾರತ ತಂಡ, ವಿಶ್ವಕಪ್ ನಂತರ ಏಕದಿನದಲ್ಲಿ ಮತ್ತೆ ...

ಢಾಕಾ: ಬಾಂಗ್ಲಾದೇಶವನ್ನು ಲಘುವಾಗಿ ಪರಿಗಣಿಸದೇ ಸಂಪೂರ್ಣ ಶಸ್ತ್ರಾಸ್ತ್ರಗಳೊಂದಿಗೆ ಕಣಕ್ಕಿಳಿಯುತ್ತಿರುವ ಭಾರತ ತಂಡ, ವಿಶ್ವಕಪ್ ನಂತರ ಏಕದಿನದಲ್ಲಿ ಮತ್ತೆ ಕಣಕ್ಕಿಳಿಯುತ್ತಿದೆ. ಮತ್ತೊಂದೆಡೆ ವಿಶ್ವಕಪ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಸೋತಿದ್ದ ಬಾಂಗ್ಲಾದೇಶ ಈಗ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. ಗುರುವಾರ ಇಲ್ಲಿನ ಶೇರೆ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ ಹಾಗೂಬಾಂಗ್ಲಾದೇಶಗಳು ಗೆಲವು ದಾಖಲಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಲು ಸಜ್ಜಾಗಿವೆ. ಭಾರತ ತಂಡದಲ್ಲಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಇತರೆ ಆರು ಏಕದಿನ ತಂಡದ ಆಟಗಾರರು ತಂಡಕ್ಕೆ ಮರಳಿದ್ದಾರೆ. ಈ ಮೂಲಕ ಸಂಪೂರ್ಣ ಪ್ರಾಬಲ್ಯದ ತಂಡ ಬಾಂಗ್ಲಾ ಪ್ರವಾಸ ಕೈಗೊಂಡಿರುವುದು, ಈ ಸರಣಿಯನ್ನು ಭಾರತ ಗಂಭೀರವಾಗಿ ಪರಿಗಣಿಸಿರುವುದಕ್ಕೆ ಸಾಕ್ಷಿಯಾಗಿದೆ. ಭಾರತ ತಂಡ ಈ ಸರಣಿಯನ್ನು ಗೆದ್ದರೆ, ಐಸಿಸಿ ಏಕದಿನ ರ್ಯಾಂಕಿಂಗ್‍ನಲ್ಲಿ ಅಗ್ರಸ್ಥಾನಕ್ಕೇರದಿದ್ದರೂ, ಆಸ್ಟ್ರೇಲಿಯಾ ಜತೆಗಿನ ಅಂತರವನ್ನು ಕಡಿಮೆ ಮಾಡಿಕೊಳ್ಳಲಿದೆ. ಆದರೆ, ಬಾಂಗ್ಲಾದೇಶ ಈ ಸರಣಿ ಗೆದ್ದರೆ, ಐಸಿಸಿ ರ್ಯಾಂಕಿಂಗ್‍ನಲ್ಲಿ ಏರಿಕೆ ಕಾಣುವುದರ ಜತೆಗೆ 2017ರ ಚಾಂಪಿಯನ್ಸ್
ಟ್ರೋಫಿಯಲ್ಲಿ ಭಾಗವಹಿಸಲು ಅವಕಾಶ ಗಟ್ಟಿ ಮಾಡಿಕೊಳ್ಳಲಿದೆ. ಹಾಗಾಗಿ ಉಭಯ ತಂಡಗಳು ಗೆಲವಿನ ಹುಡುಕಾಟದಲ್ಲಿವೆ.

ಭಾರತದ ಪ್ರಾಬಲ್ಯ ಹೆಚ್ಚು: ಈವರೆಗೆ ಭಾರತ ಹಾಗೂ ಬಾಂಗ್ಲಾದೇಶಗಳು 29 ಬಾರಿ ಮುಖಾಮುಖಿಯಾಗಿದ್ದು, ಬಾಂಗ್ಲಾ ಕೇವಲ 3 ಪಂದ್ಯಗಳಲ್ಲಿ ಮಾತ್ರ ಗೆಲವು ದಾಖಲಿಸಿದೆ. ಈ ಮೂಲಕ ಭಾರತ ಈವರೆಗೂ ಹೆಚ್ಚು ಪ್ರಾಬಲ್ಯ ಮೆರೆದಿದೆ. ಕಳೆದ ವರ್ಷ ಬಾಂಗ್ಲಾ ಪ್ರವಾಸ ಕೈಗೊಂಡಿದ್ದ ಭಾರತ ತಂಡ, ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಯುವ ಪ್ರತಿಭೆಗಳಿಗೆ ಅವಕಾಶ ನೀಡಿತ್ತು. ಆದರೂ ಸಹ ಭಾರತ ಸರಣಿಯನ್ನು ಗೆದ್ದು ಕೊಂಡಿತ್ತು. ಭಾರತ ತಂಡ ಈ ಬಾರಿ ಸಂಪೂರ್ಣವಾಗಿ ಪ್ರಮುಖ ಆಟಗಾರರನ್ನು ಕಣಕ್ಕಿಳಿಸುತ್ತಿದೆ. ಹಾಗಾಗಿ ಈ ಬಾರಿ ಬಾಂಗ್ಲಾದೇಶಕ್ಕೆ ಮತ್ತಷ್ಟು ಕಠಿಣ ಸವಾಲು ಎದುರಾಗಲಿದೆ.

ಭಾರತ ತಂಡದ ಪರ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಆರಂಬಿsಕರ ಸ್ಥಾನವನ್ನು ಮುಂದುವರಿಸಲಿದ್ದಾರೆ. ಶಿಖರ್ ಧವನ್ ಬಾಂಗ್ಲಾ ವಿರುದಟಛಿದ ಏಕೈಕ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ದಾಖಲಿಸುವ ಮೂಲಕ ಅತ್ಯುತ್ತಮ ಲಯ ಕಂಡುಕೊಂಡಿದ್ದಾರೆ. ಉಳಿದಂತೆ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಮುಂದುವರಿಯಲಿದ್ದಾರೆ. ಇನ್ನು ಸುರೇಶ್ ರೈನಾ ಹಾಗೂ ಮಹೇಂದ್ರ ಸಿಂಗ್ ಧೋನಿ ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಆಟಗಾರರಾಗಿದ್ದಾರೆ. ಇನ್ನು ರವಿಚಂದ್ರನ್ ಅಶ್ವಿನ್ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾ ತಂಡದ ಐದು ವಿಕೆಟ್ ಕಬಳಿಸಿ, ಎದುರಾಳಿ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. ಇನ್ನು ರವೀಂದ್ರ ಜಡೇಜಾ ಮತ್ತೆ ತಮ್ಮ ಫಾರ್ಮ್  ಕಂಡುಕೊಳ್ಳಲಲು ಉತ್ತಮ ಅವಕಾಶ ಸಿಕ್ಕಿದೆ. ವೇಗದ ವಿಭಾಗದಲ್ಲಿ ಭುವನೇಶ್ವರ್ ಮತ್ತೆ ತಂಡಕ್ಕೆ ಸೇರ್ಪಡೆಯಾಗಿದ್ದು, ಉಮೇಶ್ ಯಾದವ್ ಹಾಗೂ ಮೋಹಿತ್ ಶರ್ಮಾ ಕಣಕ್ಕಿಳಿಯುವ ಸಾಧ್ಯತೆಗಳಿವೆ.

ಸೇಡು ತೀರಿಸಿಕೊಳ್ಳಲು ಬಾಂಗ್ಲಾ ಸಜ್ಜು: ವಿಶ್ವಕಪ್‍ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಸೋಲನುಭವಿಸಿದ್ದ ಬಾಂಗ್ಲಾದೇಶ ಈಗ ಸೋಡು ತೀರಿಸಿಕೊಳ್ಳಲು ಸಜ್ಜಾಗಿದೆ. ಆ ಪಂದ್ಯದಲ್ಲಿ ಅಪೈರ್ ಕೆಟ್ಟ ತೀರ್ಪಿನಿಂದ ತಂಡ ಸೋತಿತ್ತು ಎಂದು ಐಸಿಸಿ ಅಧ್ಯಕ್ಷರಾಗಿದ್ದ ಬಾಂಗ್ಲಾದೇಶದ ಮುಸ್ತಾಫ ಕಮಲ್ ವಿವಾದ ಸೃಷ್ಠಿಸಿದ್ದರು. ಇನ್ನು ಬಾಂಗ್ಲಾದೇಶ ಕಳೆದೆರಡು ಸರಣಿಯಲ್ಲಿ ಜಿಂಬಾಬ್ವೆ ಹಾಗೂ ಪಾಕಿಸ್ತಾನ ವಿರುದ್ಧ ಕ್ಲೀನ್‍ಸ್ವೀಪ್ ಗೆಲವು ದಾಖಲಿಸಿ, ಏಕದಿನ ಮಾದರಿಯಲ್ಲಿ ತಾವು ಪ್ರಬಲ ತಂಡವೆಂದು ಸಾಬೀತುಪಡಿಸಿದೆ. ತಂಡದಲ್ಲಿ ತಮೀಮ್ ಇಕ್ಬಾಲ್ ಹಿಇರಿಯ ಆಟಗಾರನಾಗಿದ್ದು, ಬ್ಯಾಟಿಂಗ್ ವಿಭಾಗ ಉತ್ತಮ ಆರಂಭ ಪಡೆಯುವ ನಿರೀಕ್ಷೆ ಹೊಂದಿದೆ. ಇನ್ನು ಮುಶ್ಪೀಕರ್ ರಹೀಮ್ ಕೈಬೆರಳಿನ ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡು ತಂಡಕ್ಕೆ ಮರಳುವ ಸಾಧ್ಯತೆ ಇದೆ. ಒಂದು ವೇಳೆ ರಹೀಮ್ ತಂಡಕ್ಕೆ ಅಲಭ್ಯವಾದರೆ, ಕೀಪಿಂಗ್ ಜವಾಬ್ದಾರಿ ಹೊಸ ಪ್ರತಿಭೆ ಲಿಂಟನ್ ದಾಸ್ ಹೆಗಲ ಮೇಲೆ ಬೀಳಲಿದೆ. ಬೌಲಿಂಗ್ ವಿಭಾಗದಲ್ಲಿ ಮಶ್ರಫೆ ಮೊರ್ತಜಾ ಅನುಭವಿ ಬೌಲರ್ ಆಗಿದ್ದಾರೆ.
ಏಕದಿನಕ್ಕೂ ಮಳೆ ಭೀತಿ: ಬಾಂಗ್ಲಾ ಪ್ರವಾಸದಲ್ಲಿನ ಏಕೈಕ ಟೆಸ್ಟ್ ಪಂದ್ಯದಲ್ಲಿ ಆಟಗಾರರ ಆಟಕ್ಕಿಂತ ಮಳೆಯ ಆರ್ಭಟ ಹೆಚ್ಚಾಗಿತ್ತು. ಬಾಂಗ್ಲಾದೇಶದಲ್ಲಿ ಮಾನ್ಸೂನ್ ಆರಂಭ ವಾಗಿದ್ದು, ಏಕದಿನ ಸರಣಿಗೆ ಅಡ್ಡಿಯಾಗುವ ಸಾಧ್ಯತೆಗಳಿವೆ. ಹವಾಮಾನ ವರದಿ ಪ್ರಕಾರ ಪಂದ್ಯದ ವೇಳೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT