ಟೀಂ ಇಂಡಿಯಾ 
ಕ್ರೀಡೆ

ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ರದ್ದು

ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸವನ್ನು ರದ್ದುಗೊಳಿಸಿದೆ. ಮುಂದಿನ ತಿಂಗಳು ಭಾರತದ ಕ್ರಿಕೆಟ್ ಟೀಂ ಜಂಬಾಬ್ವೆ ಪ್ರವಾಸ ಕೈಗೊಳ್ಳಬೇಕಿತ್ತು...

ನವದೆಹಲಿ: ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸವನ್ನು ರದ್ದುಗೊಳಿಸಿದೆ. ಮುಂದಿನ ತಿಂಗಳು ಭಾರತದ ಕ್ರಿಕೆಟ್ ಟೀಂ ಜಂಬಾಬ್ವೆ ಪ್ರವಾಸ ಕೈಗೊಳ್ಳಬೇಕಿತ್ತು. ಆದರೆ ಬಿಸಿಸಿಐ ಮತ್ತು ಪಂದ್ಯದ ಪ್ರಸಾರ ಹೊಣೆ ಹೊತ್ತಿದ್ದ ಟೆನ್ ಸ್ಫೋರ್ಟ್ಸ್ ನಡುವೆ ಕೆಲವು ಸಮಸ್ಯೆ ತಲೆದೋರಿದ ಕಾರಣ  ಪ್ರವಾಸ ರದ್ದು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಭಾರತೀಯ ಕ್ರಿಕೆಟ್ ತಂಡ ಬಿಡುವಿಲ್ಲದೆ ಆಡುತ್ತಿರುವ ಕಾರಣ ಅವರಿಗೆ ಸುಸ್ತಾಗಿದೆ. ಕ್ರೀಡಾಪಟುಗಳೀಗ ವಿಶ್ರಾಂತಿ ಅಗತ್ಯವಿದೆ. ಆದ್ದರಿಂದ ಪ್ರವಾಸವನ್ನು ರದ್ದುಗೊಳಿಸಲಾಗಿದೆ ಎಂದು ಕೆಲವೊಂದು ಮೂಲಗಳು ಹೇಳಿವೆ.

ಈ ಹಿಂದೆಯೇ ಜಿಂಬಾಬ್ವೆ ಪ್ರವಾಸದ ಪ್ರಸಾರ ವಿಷಯಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮತ್ತು ಟೆನ್‌ಸ್ಫೋರ್ಟ್ಸ್ ನಡುವೆ ಸಮಸ್ಯೆಯುಂಟಾಗಿತ್ತು.  ಏತನ್ಮಧ್ಯೆ, ತಾವು ಮಧ್ಯಪ್ರವೇಶಿಸಿ ಸಮಸ್ಯೆ ಪರಿಹಾರ ಮಾಡುತ್ತೇವೆ. ಭಾರತದೊಂದಿಗೆ ಕ್ರಿಕೆಟ್ ಆಡಲು ನಾವು ಕಾತರರಾಗಿದ್ದೇವೆ . ಈಗ ಆಡದೇ ಇದ್ದರೂ ಮುಂದಿನ ವರ್ಷ ಆಡುವ ಬಗ್ಗೆ ನಾವು ಆಶಾಭಾವನೆ ಹೊಂದಿದ್ದೇವೆ ಎಂದು ಜಿಂಬಾಬ್ವೆ ಕ್ರಿಕೆಟ್ ಮಂಡಳಿ ಹೇಳಿಕೆ ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!