ಐಸಿಸಿ 
ಕ್ರೀಡೆ

ಐಸಿಸಿಗೆ ನೂತನ ಅಧ್ಯಕ್ಷರ ಆಯ್ಕೆ?

ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ಐಸಿಸಿ)ಯ ಮಹಾಧಿವೇಶನ ಆರಂಭಗೊಂಡಿದ್ದು, ಐಸಿಸಿಗೆ ನೂತನ ಅಧ್ಯಕ್ಷರನ್ನು ಆರಿಸುವ ಪ್ರಮುಖ ಉದ್ದೇಶವೂ ಸೇರಿದಂತೆ ಹಲವಾರು ವಿಚಾರಗಳು ಈ ಸಭೆಯಲ್ಲಿ ಚರ್ಚೆಗೆ ಬರಲಿವೆ.

ಬ್ರಿಡ್ಜ್ ಟೌನ್: ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ಐಸಿಸಿ)ಯ ಮಹಾಧಿವೇಶನ ಆರಂಭಗೊಂಡಿದ್ದು, ಐಸಿಸಿಗೆ ನೂತನ ಅಧ್ಯಕ್ಷರನ್ನು ಆರಿಸುವ ಪ್ರಮುಖ ಉದ್ದೇಶವೂ ಸೇರಿದಂತೆ ಹಲವಾರು ವಿಚಾರಗಳು ಈ ಸಭೆಯಲ್ಲಿ ಚರ್ಚೆಗೆ ಬರಲಿವೆ.

ಈ ಸಭೆಯಲ್ಲಿ ಐಸಿಸಿಯ 50ಕ್ಕೂ ಹೆಚ್ಚು ಸದಸ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ. 2015ರ ವಿಶ್ವಕಪ್ ತರುವಾಯ, ಅಂದಿನ ಐಸಿಸಿ ಅಧ್ಯಕ್ಷೆರಾಗಿದ್ದ ಬಾಂಗ್ಲಾದೇಶದ ಮುಸ್ತಾಫ ಕಮಲ್ ಅವರು ತಮ್ಮ  ಹುದ್ದೆಯನ್ನು ತ್ಯಜಿಸಿದ್ದರು. ಅಲ್ಲಿಂದ ಇಲ್ಲಿಯವರೆಗೂ ಹೊಸ ಅಧ್ಯಕ್ಷರು ಆಯ್ಕೆಯಾಗಿಲ್ಲ. ಇದೀಗ, ಅವರ ಆಯ್ಕೆಗೆ ಕಸರತ್ತು ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಕಾರ್ಯಕಾರಿ ಸಮಿತಿಯ ಮುಖ್ಯಸ್ಥ ನಜಾಮ್ ಸೇಥಿಯವರು ಆರಿಸಿಬರಬಹುದೆಂದು ನಿರೀಕ್ಷಿಸಲಾಗಿದೆ.

ಕಮಲ್ ಅವರು ಈಗಾಗಲೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಒಲವು ತೋರಿದ್ದಾರೆ. ಐಸಿಸಿ ಅಧ್ಯಕ್ಷರ ಆಯ್ಕೆಯನ್ನು ಹೊರತುಪಡಿಸಿದರೆ, ಸರ್ಬಿಯಾ ದೇಶವು ತನಗೆ ಐಸಿಸಿ ಸದಸ್ಯತ್ವ ಬೇಕೆಂದು ಸಲ್ಲಿಸಿರುವ ಮನವಿ ಪತ್ರ ಮಹಾಧಿವೇಶನದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆಂದು ನಿರೀಕ್ಷಿಸಲಾಗಿದೆ. ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಹಾಗೂ ಭದ್ರತಾ ಸಮಿತಿಯ (ಎಸಿಎಸ್‍ಯು) ಮೂಲಕ ಐಸಿಸಿಗೆ ಸರ್ಬಿಯಾ ಅರ್ಜಿ ಸಲ್ಲಿಸಿದೆ. ಇನ್ನು, 2015ರ ವರ್ಷದಲ್ಲಿ ಐಸಿಸಿಯ ನಿಯಮಾವಳಿಗಳು, ಜಾಗತಿಕ ಮಟ್ಟದಲ್ಲಿ ಕ್ರಿಕೆಟ್ ಅಭಿವೃದ್ಧಿಗಾಗಿ ಕೈಗೊಳ್ಳಬೇಕಿರುವ ಕಾರ್ಯತಂತ್ರಗಳ ಬಗ್ಗೆ ಮಹಾಧಿವೇಶದಲ್ಲಿ ಚರ್ಚಿಸಲಾಗುತ್ತದೆ.  ಕ್ರಿಕೆಟ್ ಅಭಿವೃದ್ಧಿಗಾಗಿ, ವಿವಿಧ ರಾಷ್ಟ್ರಗಳ ಕ್ರಿಕೆಟ್ ಮಂಡಳಿಗಳ ನೀಡಿರುವ ಸಲಹೆಗಳನ್ನೂ ಅಧಿವೇಶನದಲ್ಲಿ ಸ್ವೀಕರಿಸಿ ಚರ್ಚಿಸಲಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT