ಸಚಿನ್ ತೆಂಡೂಲ್ಕರ್ 
ಕ್ರೀಡೆ

ತೆಂಡೂಲ್ಕರ್ 21ನೇ ಶತಮಾನದ ಅತ್ಯುತ್ತಮ ಟೆಸ್ಟ್ ಆಟಗಾರ

ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು 21ನೇ ಶತಮಾನದ ಅತ್ಯುತ್ತಮ ಟೆಸ್ಟ್ ಆಟಗಾರರಾಗಿ ಆಯ್ಕೆಯಾಗಿದ್ದಾರೆ.

ನವದೆಹಲಿ: ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು 21ನೇ ಶತಮಾನದ ಅತ್ಯುತ್ತಮ ಟೆಸ್ಟ್ ಆಟಗಾರರಾಗಿ ಆಯ್ಕೆಯಾಗಿದ್ದಾರೆ.

ಕ್ರಿಕೆಟ್ ಆಸ್ಟ್ರೇಲಿಯಾ ನಡೆಸಿದ ಆನ್‌ಲೈನ್ ಮತದಾನದಲ್ಲಿ ಭಾರತೀಯ ಬ್ಯಾಟಿಂಗ್ ಮಾಸ್ಟರ್ ಅತೀ ಹೆಚ್ಚು ಮತಗಳನ್ನು ಪಡೆಯುವ ಮೂಲಕ 21ನೇ ಶತಮಾನದ ಅತ್ಯುತ್ತಮ ಟೆಸ್ಟ್ ಆಟಗಾರ ಗೌರವಕ್ಕೆ ಪಾತ್ರರಾಗಿದ್ದಾರೆ.

ಈ ಆನ್‌ಲೈನ್ ಮತದಾನದಲ್ಲಿ ಒಟ್ಟು 16 ಸಾವಿರ ಕ್ರಿಕೆಟ್ ಅಭಿಮಾನಿಗಳು ಭಾಗವಹಿಸಿದ್ದರು. ಮತದಾನ ನಡೆದ ಹತ್ತು ದಿನಗಳ ಬಳಿಕ ಫಲಿತಾಂಶ ಪ್ರಕಟಿಸಲಾಗಿದೆ.

ಸಚಿನ್ ತೆಂಡೂಲ್ಕರ್ ಅವರು ಶೇ.23ರಷ್ಟು ಮತ ಪಡೆದು ಮೊದಲ ಸ್ಥಾನದಲ್ಲಿದ್ದು, ಶ್ರೀಲಂಕಾದ ಕುಮಾರ್ ಸಂಗಕ್ಕರ್ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಅಡಂ ಗಿಲ್‌ಕ್ರಿಸ್ಟ್ ಮತ್ತು ರಿಕ್ಕಿ ಪಾಂಟಿಂಗ್ ಹಾಗೂ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಜಾಕ್ವಾಸ್ ಕಾಲಿಸ್ ನಂತರದ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!