ವಿದರ್ಭ ಸೇರಿದ ಜಾಫರ್
ರಣಜಿಯಲ್ಲಿ ಗರಿಷ್ಠ ರನ್ ಪೇರಿಸಿದ ಹಿರಿಮೆಗಳಿಸಿರುವ ಮುಂಬೈ ತಂಡದ ಮಾಜಿ ನಾಯಕ ವಾಸೀಂ ಜಾಫರ್ ಅವರು, ವಿದರ್ಭ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆಂದು ಹೇಳಲಾಗುತ್ತಿದೆ.
ಮುಂಬೈ: ರಣಜಿಯಲ್ಲಿ ಗರಿಷ್ಠ ರನ್ ಪೇರಿಸಿದ ಹಿರಿಮೆಗಳಿಸಿರುವ ಮುಂಬೈ ತಂಡದ ಮಾಜಿ ನಾಯಕ ವಾಸೀಂ ಜಾಫರ್ ಅವರು, ವಿದರ್ಭ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆಂದು ಹೇಳಲಾಗುತ್ತಿದೆ.
ಜಾಫರ್ ಅವರ ಸೇರ್ಪಡೆಯನ್ನು ಅಧಿಕೃತವಾಗಿ ಘೋಷಿಸಿರುವ ವಿದರ್ಭ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ದೀಕ್ಷಿತ್, `ವಾಸೀಂರವರ ಅನುಭವ ಹಾಗೂ ಅವರಲ್ಲಿನ ಕ್ರಿಕೆಟ್ ಜ್ಞಾನದಿಂದ ವಿದರ್ಭ ತಂಡಕ್ಕೆ ಸಾಕಷ್ಟು ಪ್ರಯೋಜನವಾಗಲಿದೆ' ಎಂಬ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ವಿದೇಶ ಪ್ರವಾಸದಲ್ಲಿರುವ ವಾಸೀಂ ಜಾಫರ್ ಅವರು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಭಾರತಕ್ಕೆ ವಾಪಸ್ಸಾದ ನಂತರ ಈ ಬಗ್ಗೆ ಅಭಿಪ್ರಾಯ ತಿಳಿಸುವುದಾಗಿ ಅವರು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.