ನವದೆಹಲಿ: ಐಪಿಎಲ್ 6ನೇ ಆವೃತ್ತಿಯ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಮೇಲೆ ಆರೋಪಪಟ್ಟಿ ಸಲ್ಲಿಸುವಂತೆ ಇಲ್ಲಿನ ಸ್ಥಳೀಯ ನ್ಯಾಯಾಲಯ ನೀಡಬೇಕಾಗಿದ್ದ ಆದೇಶವನ್ನು ಜುಲೈ 25ಕ್ಕೆ ಮುಂದೂಡಿದೆ.
ಕ್ರಿಕೆಟಿಗರಾದ ಎಸ್.ಶ್ರೀಶಾಂತ್, ಅಜಿತ್ ಚಾಂಡೀಲಾ ಹಾಗೂ ಅಂಕಿತ್ ಚವಾಣ್ ಸೇರಿದಂತೆ ಭೂಗತ ದೊರೆ ದಾವೂದ್ ಇಬ್ರಾಹಿಂ ಸಹ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.
ಇದೇ ವರ್ಷ ಮೇ 23ರಂದು ಈ ಪ್ರಕರಣದ ವಿಚಾರಣೆ ನಡೆಸಿದ್ದ ಇಲ್ಲಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಮೂರ್ತಿ ನ್ಯಾ. ನೀನಾ ಬಲ್ಸಾಲ್ ಕೃಷ್ಣ ಅವರು, ಈ ಪ್ರಕರಣದ ಮುಂದಿನ ಆದೇಶವನ್ನು ಜೂನ್ 29ರಂದು ನೀಡುವುದಾಗಿ ಹೇಳಿದ್ದರು. ಅಲ್ಲದೆ, ಜೂನ್ 6ರೊಳಗೆ ಆರೋಪಿಗಳ ಪರವಾಗಿ ವಾದ ಮಂಡಿಸುತ್ತಿರುವ ವಕೀಲರು ತಮ್ಮ ವಾದಗಳನ್ನು ಸಲ್ಲಿಸುವಂತೆ ನ್ಯಾಯಾಧೀಶರು ಸೂಚಿಸಿದ್ದರು.