ಕ್ರೀಡೆ

ನವೆಂಬರ್‌ನಲ್ಲಿ ನಡೆಯಲಿದೆ ಮೊದಲ ಹಗಲು-ರಾತ್ರಿ ಟೆಸ್ಟ್ ಪಂದ್ಯ

Mainashree

ಮೆಲ್ಬೋರ್ನ್: ಟೆಸ್ಟ್ ಪಂದ್ಯಗಳ ಮೂಲಕ ಕ್ರಿಕೆಟ್ ಜಗತ್ತಿಗೆ ಪರಿಚಯವಾಯಿತು. ಅಲ್ಲಿಂದ ಇಲ್ಲಿಯವರೆಗೂ ಹಲವಾರು ಬದಲಾವಣೆಗಳನ್ನು ಕಂಡಿರುವ ಟೆಸ್ಟ್ ಪಂದ್ಯಾವಳಿ ಇದೀಗ ಹಗಲು-ರಾತ್ರಿ ನಡೆಯುವ ಮೂಲಕ ಹೊಸ ಇತಿಹಾಸಕ್ಕೆ ಸಾಕ್ಷಿಯಾಗಲಿದೆ.

ಕ್ರಿಕೆಟ್ ನಲ್ಲಿ ಹಲವು ಹೊಸತನವನ್ನು ತರುವಲ್ಲಿ ಯಶಸ್ವಿಯಾಗಿರುವ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಈಗ ಹಗಲು ರಾತ್ರಿ ಟೆಸ್ಟ್ ಪಂದ್ಯ ಆಯೋಜಿಸಲು ಮುಂದಾಗಿದೆ.

ಸಾಂಪ್ರದಾಯಿಕ ಎದುರಾಳಿಗಳಾದ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧ ಮೊದಲ ಐತಿಹಾಸಿಕ ಟೆಸ್ಟ್ ಪಂದ್ಯ ನವೆಂಬರ್ 27ರಂದು ಅಡಿಲೇಡ್ ಒವಲ್ ನಲ್ಲಿ ಆರಂಭಗೊಳ್ಳಲಿದೆ.

ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ಚಾಪೆಲ್ -ಹ್ಯಾಡ್ಲಿ ಟ್ರೋಫಿ ಸರಣಿಯ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಹಗಲು ರಾತ್ರಿ ಪಂದ್ಯವಾಗಲಿದೆ. ಈ ಪಂದ್ಯಕ್ಕೆ ಪಿಂಕು ಬಣ್ಣದ ಚೆಂಡುಗಳನ್ನು ಬಳಸಲಾಗುತ್ತದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಿಸಿದೆ.

SCROLL FOR NEXT