ಆಸ್ಟ್ರೇಲಿಯಾ ತಂಡ (ಸಂಗ್ರಹ ಚಿತ್ರ) 
ಕ್ರೀಡೆ

ವಿಶ್ವಕಪ್: ಭಾರತದ ದಾಖಲೆ ಮುರಿದ ಆಸ್ಟ್ರೇಲಿಯಾ

ಪ್ರಸಕ್ತ ಸಾಲಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ದಾಖಲೆಗಳು ಸಾಲುಸಾಲಾಗಿ ಮುರಿಯಲ್ಪಡುತ್ತಿದ್ದು, ಈ ಹಿಂದೆ ಭಾರತ ನಿರ್ಮಿಸಿದ್ದ ದಾಖಲೆ...

ಪರ್ತ್: ಪ್ರಸಕ್ತ ಸಾಲಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ದಾಖಲೆಗಳು ಸಾಲುಸಾಲಾಗಿ ಮುರಿಯಲ್ಪಡುತ್ತಿದ್ದು, ಈ ಹಿಂದೆ ಭಾರತ ನಿರ್ಮಿಸಿದ್ದ ದಾಖಲೆಯನ್ನು ಆಸ್ಟ್ರೇಲಿಯಾ ತಂಡ ಮುರಿದಿದೆ.

ಈ ಹಿಂದೆ ವಿಶ್ವಕಪ್ ಟೂರ್ನಿಯಲ್ಲಿ ಬರ್ಮುಡಾ ತಂಡದ ವಿರುದ್ಧ ಭಾರತ ತಂಡ 413 ರನ್ ಗಳಿಸಿತ್ತು. ಇದು ವಿಶ್ವಕಪ್ ಇತಿಹಾಸದಲ್ಲಿಯೇ ತಂಡವೊಂದರ ಅತಿದೊಡ್ಡ ರನ್ ಗಳಿಕೆಯಾಗಿತ್ತು. ಆದರೆ ಈ ದಾಖಲೆಯನ್ನು ಇಂದು ಆಸ್ಟ್ರೇಲಿಯಾ ತಂಡ ಬದಿಗೊತ್ತಿದೆ. ಪರ್ತ್ ನಲ್ಲಿ ಆಫ್ಘಾನಿಸ್ತಾನ ತಂಡದ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ಬರೊಬ್ಬರಿ 417 ರನ್ ಸಿಡಿಸಿದೆ. ಆ ಮೂಲಕ ವಿಶ್ವಕಪ್ ಇತಿಹಾಸದಲ್ಲಿ ಅತಿದೊಡ್ಡ ರನ್ ಗಳಿಕೆ ಮಾಡಿದ ತಂಡ ಎಂಬ ದಾಖಲೆಗೆ ಆಸ್ಟ್ರೇಲಿಯಾ ಪಾತ್ರವಾಗಿದೆ.

ಅಲ್ಲದೇ ಇದೇ ವಿಶ್ವಕಪ್ ಮತ್ತೊಂದು ದಾಖಲೆ ನಿರ್ಮಾಣವಾಗಿದ್ದು, ವಿಶ್ವಕಪ್ 2015 ಟೂರ್ನಿಯಲ್ಲಿ ಸತತ ಮೂರು ಬಾರಿ 400ಕ್ಕೂ ಅಧಿಕ ರನ್ ಪೇರಿಸಲ್ಪಟ್ಟಿದೆ. 40 ವರ್ಷಗಳ ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ರೀತಿ 400 ಪ್ಲಸ್ ರನ್ ಗಳು  ಹರಿದು ಬಂದಿದೆ.

ವಿಶ್ವಕಪ್ ಇತಿಹಾಸದಲ್ಲೇ ಅತಿ ಹೆಚ್ಚು ಟೀಂ ರನ್ ಗಳಿಸಿರುವ ತಂಡಗಳು

417/6, ಆಸ್ಟ್ರೇಲಿಯಾ vs ಅಫ್ಘಾನಿಸ್ತಾನ (2015)
413/5, ಭಾರತ vs ಬರ್ಮುಡಾ, 2007
411/4, ದಕ್ಷಿಣ ಆಫ್ರಿಕಾ vs ಐರ್ಲೆಂಡ್, 2015
408/5, ದಕ್ಷಿಣ ಆಫ್ರಿಕಾ vs ವೆಸ್ಟ್ ಇಂಡೀಸ್, 2015
398/5, ಶ್ರೀಲಂಕಾ vs ಕೀನ್ಯಾ (1996)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ