ಜೈನ್ ವಿಶ್ವವಿದ್ಯಾಲಯ 
ಕ್ರೀಡೆ

ಕ್ರೈಸ್ಟ್ ಕಾಲೇಜ್‍ಗೆ ಗೆಲವು

ಜೈನ್ ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಲ್ಪಟ್ಟಿರುವ 16ನೇ ಅಖಿಲ ಭಾರತ ಕ್ರೀಡಾ ಹಬ್ಬದ ಅಂಗವಾಗಿ ಭಾನುವಾರ ನಡೆದ ಪುರುಷರ ವಿಭಾಗದ ಕ್ರಿಕೆಟ್ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಹೈದರಾಬಾದ್‍ನ ಟಿಕೆಆರ್‍ಇಎಸ್ ಕಾಲೇಜು ತಂಡ ಜಯ ಗಳಿಸಿದೆ...

ಬೆಂಗಳೂರು: ಜೈನ್ ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಲ್ಪಟ್ಟಿರುವ 16ನೇ ಅಖಿಲ ಭಾರತ  ಕ್ರೀಡಾ ಹಬ್ಬದ ಅಂಗವಾಗಿ ಭಾನುವಾರ ನಡೆದ ಪುರುಷರ ವಿಭಾಗದ ಕ್ರಿಕೆಟ್ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಹೈದರಾಬಾದ್‍ನ ಟಿಕೆಆರ್‍ಇಎಸ್ ಕಾಲೇಜು ತಂಡ ಜಯ ಗಳಿಸಿದೆ.

ಜೆಐಆರ್‍ಎಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಬೆಂಗಳೂರಿನ ಪೆಸಿಟ್ ಕಾಲೇಜು ನಿಗದಿತ 18 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತ್ತು.  ನಂತರ ಬ್ಯಾಟಿಂಗ್‍ಗೆ ಇಳಿದ ಟಿಕೆಆರ್ ಇ ಎಸ್ ತಂಡ, 16.2 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿ ಜಯದ ನಗೆ ಬೀರಿತು.

ಇದಾದ ನಂತರ, ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾಲಯ ಹಾಗೂ ತ್ರಿಚಿಯ ಬಿಐಟಿ ಕಾಲೇಜುಗಳ ನಡುವೆ ನಡೆದ ಕ್ರಿಕೆಟ್ ಪಂದ್ಯದಲ್ಲಿ ಕ್ರೈಸ್ಟ್ ಕಾಲೇಜು ಜಯ ಗಳಿಸಿತು. ಮೊದಲು ಬ್ಯಾಟ್ ಮಾಡಿದ ಕ್ರೈಸ್ಟ್ ಕಾಲೇಜು ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ಬಿಐಟಿ ಕಾಲೇಜು ತಂಡ, 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿಲು ಮಾತ್ರ ಶಕ್ತವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT